Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮಚ್ಚಿನಿಂದ ಕೊಚ್ಚಿ ಬೈಕ್ ಸವಾರನೊಬ್ಬನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಕಾಗವಾಡ ತಾಲೂಕಿನ ಐನಾಪೂರ - ಕಾತ್ರಾಳ ರಸ್ತೆಯಲ್ಲಿ ನಡೆದಿದೆ. 26 ವರ್ಷದ ಚಿಂತಾಮಣಿ ಬಂಡಗರ ಕೊಲೆಯಾದ ವ್ಯಕ್ತಿ. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಕಾತ್ರಾಳ ಗ್ರಾಮದ ನಿವಾಸಿಯಾದ ಈತ ಐನಾಪೂರ ಗ್ರಾಮದಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿದ್ದ. ರಾತ್ರಿ 11 ಗಂಟೆಗೆ ಮೆಡಿಕಲ್ ಶಾಪ್ ಮುಚ್ಚಿ ಮನೆಗೆ ತೆರಳುವಾಗ ಹಿಂಬದಿಯಿಂದ ಮಚ್ಚಿನಿಂದ ಹೊಡೆದು ಕೊಲೆ ಮಾಡಲಾಗಿದೆ. ಕೃತ್ಯವೆಸಗಿದ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದು, ಕೊಲೆಗೆ ಸಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.