Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಶೀಘ್ರದಲ್ಲೇ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ಕಾಮಗಾರಿ ಆರಂಭ ಮಾಡಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಭರವಸೆ ನೀಡಿದ್ದಾರೆ,.. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬೀದರ್ ಉಸ್ತುವಾರಿ ಸಚಿವ ಪ್ರಭು ಚಹ್ವಾಣ್ ಜೊತೆ ವರ್ಚುವಲ್ ಸಭೆ ನಡೆಸಿದ್ದರು,. ಈ ವೇಳೆ ಸಭೆ ಭಾಗಿಯಾಗಿದ್ದ ಸಚಿವ ಪ್ರಭು ಚಹ್ವಾಣ್ ಕಲ್ಯಾಣ ಕರ್ನಾಟಕ ಭಾಗದ ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದ್ದರು,. ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ಕಾಮಗಾರಿಗೆ ಸಿಎಂ ಬಿಎಸ್ವೈ ಶಂಕುಸ್ಥಾಪನೆ ಮಾಡಿದ್ದು, ಈಗಾಗಲೇ 200 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಸದ್ಯ ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗಿದ್ದರಿಂದ ಕಾಮಗಾರಿಗೆ ವಿಳಂಬವಾಗಿದ್ದು ಮುಂದಿನ ಎರಡು ತಿಂಗಳಲ್ಲಿ ಕಾಮರಾಗಿ ಆರಂಭಮಾಡುವುದಾಗಿ ಭರವಸೆ ನೀಡಿದ್ರು,.. ಬಳಿಕ ಬಸವಕಲ್ಯಾಣ ನಗರದ ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಸಚಿವರಾದ ಪ್ರಭು ಚವ್ಹಾಣ ಅವರು ತಾಲ್ಲೂಕಿನ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಸವಕಲ್ಯಾಣದ ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಿದ್ದರು