ಬಾಗಲಕೋಟೆ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಸವಜಯ ಮೃತ್ಯುಂಜಯಶ್ರೀಗಳು ಕಿಡಿಕಾರಿದ್ದಾರೆ.
ಬಸವಜಯ ಮೃತ್ಯುಂಜಯಶ್ರೀಗಳ ಜನ್ಮದಿನೋತ್ಸವದ ಹಿನ್ನಲೆಯಲ್ಲಿ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಸಲಾಗಿದೆ.
ಈ ವೇಳೆ ಮಾತನಾಡಿದ ಶ್ರೀಗಳು, ಮೀಸಲಾತಿ ಸಂಬಂಧ ರಾಜ್ಯ ಸರ್ಕಾರ ಸ್ಪಂದಿಸಲೇ ಇಲ್ಲ. ಸರ್ಕಾರ ಸ್ಪಂದಿಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ. ಮುಂದಾಗುವ ಅನಾಹುತಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಬಸವಜಯ ಮೃತ್ಯುಂಜಯಶ್ರೀಗಳು ಎಚ್ಚರಿಕೆ ನೀಡಿದ್ದಾರೆ.