Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಪ್ರೀತಿಯಿಂದ ಸಾಕಿದ್ದ ಶ್ವಾನ ಸನ್ನಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕುಟುಂಬದವರು ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.
ಮುದ್ದಿನ ನಾಯಿ "ಸನ್ನಿ" ವಯೋಸಹಜ ಮೃತಪಟ್ಟಿದ್ದು, ಸೋಮವಾರ ಅಂತ್ಯ ಸಂಸ್ಕಾರ ನೆರವೇರಿಸಿದರು.
ಶ್ವಾನ ಸನ್ನಿ ಮೃತಪಟ್ಟಿದ್ದು, ಅಂತ್ಯ ಸಂಸ್ಕಾರ ನೆರವೇರಿಸಿದ ಫೋಟೊಗಳನ್ನು ಬೊಮ್ಮಾಯಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಸನ್ನಿ ಸಾವನ್ನಪ್ಪಿದ್ದು ತೀವ್ರ ದುಃಖ ತಂದಿದೆ. ಕುಟುಂಬದ ಓರ್ವ ಸದಸ್ಯನನ್ನು ಕಳೆದುಕೊಂಡಂತಾಗಿದೆ. ಮನೆಯ ಹಾಗೂ ಮನೆಗೆ ಬರುವ ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುತ್ತಿತ್ತು ಎಂದು ಬೊಮ್ಮಾಯಿ ಬರೆದುಕೊಂಡಿದ್ದಾರೆ.