Publish Date: Sat, 29 Apr 2023 (12:27 IST)
Updated Date: Sat, 29 Apr 2023 (12:29 IST)
ಯಾದಗಿರಿ : ಸ್ವಾತಂತ್ರ್ಯ ಬಂದ ಮೇಲೆ ದೇಶ ಒಡೆದಿರಿ. ಆಮೇಲೆ ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದೀರಿ. ವೀರಶೈವ ಲಿಂಗಾಯತರನ್ನು ಒಡೆಯಲು ಹೋಗಿ ಮಣ್ಣು ಮುಕ್ಕಿದ್ದೀರಿ. ಈಗ ಅದೇ ತಪ್ಪನ್ನು ಮಾಡುತ್ತಿದ್ದೀರಿ.
ತಾಕತ್ ಇದ್ದರೆ, ಧಮ್ ಇದ್ದರೆ ಮೀಸಲಾತಿಯನ್ನು ಮುಟ್ಟಿ ನೋಡಿ. ಈ ಕೇಸರಿ ಅಲೆಯನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು.
ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ಬಿಜೆಪಿ ಅಭ್ಯರ್ಥಿ ಅಮೀನರೆಡ್ಡಿ ಪಾಟೀಲ ಯಾಳಗಿ ಪರ ರೋಡ್ ಶೋ ನಡೆಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಇಡೀ ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ. ಕಾಂಗ್ರೆಸ್ನ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರೂ ಬರಲಿ, ಲೋಕಲ್ನವರೂ ಬರಲಿ.
ಕೇಸರಿ ಅಲೆಯನ್ನು ತಡೆಗಟ್ಟಲಿ ನೋಡೋಣ. ಇಷ್ಟು ವರ್ಷ ದೇಶವನ್ನು ಮೋಸ, ಸುಳ್ಳಿನಿಂದ ಕಾಂಗ್ರೆಸ್ನವರು ಆಳ್ವಿಕೆ ಮಾಡಿದ್ದಾರೆ. ಇನ್ನುಮುಂದೆ ನಿಮ್ಮ ಆಟ, ಸುಳ್ಳು ನಡೆಯುವುದಿಲ್ಲ ಎಂದು ಗುಡುಗಿದರು.