Publish Date: Sun, 19 Jul 2020 (09:11 IST)
Updated Date: Sun, 19 Jul 2020 (09:12 IST)
ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ ಲಾಕ್ ಡೌನ್ ಹೇರಿಕೆಯಾಗಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರನ್ನು ವರ್ಗಾವಣೆ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.
ಅನಿಲ್ ಕುಮಾರ್ ಅವರನ್ನು ವರ್ಗಾವಣೆ ಮಾಡಿರುವುದಕ್ಕೆ ಅವರು ಇತ್ತೀಚೆಗೆ ನೀಡಿದ ಒಂದು ಹೇಳಿಕೆ ಕಾರಣವಾಯಿತೇ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರಿಂದ ನಡೆದಿದೆ.
ಮೊನ್ನೆಯಷ್ಟೇ ಬಿಬಿಎಂಪಿ ಆಯುಕ್ತರು ಬೆಂಗಳೂರಿನಲ್ಲಿ ಇನ್ನೂ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದಿದ್ದರು. ಇದರ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಲಾಕ್ ಡೌನ್ ವಿಸ್ತರಣೆಯಿಲ್ಲ ಎಂದು ಖಡಕ್ ಆಗಿ ಹೇಳಿದ್ದರು.