ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್‌ಗಳ ಮೀಸಲಾತಿ ಅಧಿಸೂಚನೆಯನ್ನು ಪ್ರಕಟಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.
ಬಿಬಿಎಂಪಿ ಚುನಾವಣೆ ನಡೆಸುವಂತೆ ಕೋರಲಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಖಾನ್ವಿಲ್ಕರ್ ನೇತೃತ್ವದ ಪೀಠವು, ಬಿಬಿಎಂಪಿಯ ಚುನಾವಣಾ ಕಾನೂನುಬದ್ಧವಾಗಿ ಸೂಕ್ತ ಸಮಯದಲ್ಲಿ ಪೂರ್ಣಗೊಳಿಸುವಂತೆ ಕರ್ನಾಟಕ ಚುನಾವಣಾ ಆಯೋಗಕ್ಕೆ ನಿರ್ದೇಶಿಸಲಾಗಿದೆ.
ಚುನಾವಣೆ ನಡೆಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಕೋರಿ ಕಾಂಗ್ರೆಸ್‌ನ ಅಬ್ದುಲ್ ವಾಜಿದ್ ಹಾಗೂ ಶಿವರಾಜು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಕರ್ನಾಟಕ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಹಾಜರಾಗಿ, 'ಬಿಬಿಎಂಪಿ ವಾರ್ಡ್‌ಗಳ ಮರು ವಿಂಗಡಣೆ ಹಾಗೂ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡ ಕ್ರಮದ ಕುರಿತ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಜೂನ್ 9 ರಂದು ವಾರ್ಡ್‌ಗಳ ಮರು ವಿಂಗಡಣೆಯ ಕರಡನ್ನು ಪ್ರಕಟಿಸಲಾಯಿತು. ಅಂತಿಮ ಅಧಿಸೂಚನೆಯನ್ನು ಜೂನ್ 14 ರಂದು ಹೊರಡಿಸಲಾಯಿತು.