ಕೇವಲ 14 ಬಿಬಿಎಂಪಿ ಸದಸ್ಯರನ್ನು ಇಟ್ಟುಕೊಂಡು ಜೆಡಿಎಸ್ ಮೇಯರ್ ಸ್ಥಾನ ಕೇಳುವುದು ಸರಿಯಲ್ಲ ಎಂದು ಜೆಡಿಎಸ್ ರೆಬಲ್ ಶಾಸಕ ಜಮೀರ್ ಅಹ್ಮದ್ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಮೈತ್ರಿಗೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠರ ಮುಂದಿನ ನಡೆ ನೋಡಿ, ನಾವು ತೀರ್ಮಾನ ಕೈಗೊಳ್ಳುತ್ತೇವೆ. ಒಂದು ವೇಳೆ ಜೆಡಿಎಸ್ ವರಿಷ್ಠರ ನಡೆ ಬದಲಾದರೇ ನಮ್ಮ ನಡೆ ಬದಲಾಯಿಸುತ್ತೇವೆ. ಏನೇ ಆದರೂ ಫೈನಲ್ ಗೆಲ್ಲುವವರು ನಾವೇ ಎಂದರು.
ಬಿಬಿಎಂಪಿ ಚುನಾವಣೆಯಲ್ಲಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹಾಗೂ ದೇವೇಗೌಡರು ಮಾತುಕತೆಗೆ ಆಹ್ವಾನಿಸಿದರೆ, ನಾವು ಮಾತುಕತೆಗೆ ಸಿದ್ಧ ಎಂದು ತಿಳಿಸಿದರು.
ಬಿಬಿಎಂಪಿಯಲ್ಲಿ ಜೆಡಿಎಸ್ ಪಕ್ಷ ಕಾಂಗ್ರೆಸ್ ಜೊತೆ ಹೋದರೆ ಉತ್ತಮ. ಕಾಂಗ್ರೆಸ್ ಜೊತೆ ಇದ್ದರೆ ಜಾತ್ಯಾತೀತ ನಿಲುವಿಗೆ ಬೆಲೆ ಸಿಕ್ಕಂತಾಗುತ್ತದೆ. ಮುಸ್ಲಿಂ ಸಮುದಾಯದವರಿಗೆ ಉಪಮೇಯರ್ ಸ್ಥಾನ ದೊರೆಯುತ್ತದೆ ಎಂದು ಖುದ್ದು ದೇವೇಗೌಡರೇ ಹೇಳಿದ್ದರೆಂದು ಶಾಸಕ ಜಮೀರ್ ಅಹ್ಮದ್ ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ