Publish Date: Wed, 24 May 2023 (14:00 IST)
Updated Date: Wed, 24 May 2023 (12:57 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆಗೆ ಜನ ಹೈರಾಣಾಗಿದ್ದಾರೆ. ಭಾರಿ ಮಳೆಯಿಂದಾಗಿ ನೂರಾರು ಮರಗಳು ಧರೆಗುರುಳಿವೆ. ಮರ ಬಿದ್ದು ಎರಡು ದಿನವಾದರೂ ಮರದ ತುಂಡುಗಳನ್ನು ಅಧಿಕಾರಿಗಳು ತೆರವುಗೊಳಿಸಿಲ್ಲ. ರಸ್ತೆಯಲ್ಲಿ ಬಿದ್ದಿರುವ ಬೃಹತ್ ಗಾತ್ರದ ಮರಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೆ.ಆರ್ ಸರ್ಕಲ್, ಕಬ್ಬನ್ ಪಾರ್ಕ್ ರಸ್ತೆಯ ಸುತ್ತಮುತ್ತ ಸಾಕಷ್ಟು ಮರಗಳು ಧರೆಗುರುಳಿವೆ. ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರು ಕೂಡಲೇ ಮರದ ತುಂಡುಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.