Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬಿಬಿಎಂಪಿ ಅಧಿಕಾರಿಗಳ ಎಡವಟ್ಟು: ತೆರಿಗೆ ವ್ಯಾಪ್ತಿಯಿಂದ 78 ಸಾವಿರ ಶ್ರೀಮಂತರು ಹೊರಗೆ!

ಬಿಬಿಎಂಪಿ ಅಧಿಕಾರಿಗಳ ಎಡವಟ್ಟು: ತೆರಿಗೆ ವ್ಯಾಪ್ತಿಯಿಂದ 78 ಸಾವಿರ ಶ್ರೀಮಂತರು ಹೊರಗೆ!
bengaluru , ಶುಕ್ರವಾರ, 20 ಆಗಸ್ಟ್ 2021 (15:27 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಎಡವಟ್ಟಿನಿಂದಾಗಿ ನಗರದಲ್ಲಿನ ಸುಮಾರು 78 ಸಾವಿರ ಶ್ರೀಮಂತರು ಆಸ್ತಿ ತೆರಿಗೆಯನ್ನೇ ಪಾವತಿಸಿಲ್ಲ ಎಂದು
ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
 ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ನಗರದಲ್ಲಿ 20 ಲಕ್ಷ ಆಸ್ತಿಗಳಿದ್ದು, ಅದರಲ್ಲಿ 18 ಲಕ್ಷ ಆಸ್ತಿಗಳು ತೆರಿಗೆ ವ್ಯಾಪ್ತಿಗೆ ಬರುತ್ತವೆ. ಈ ಪೈಕಿ ಪಾಲಿಕೆ ಅಧಿಕಾರಿಗಳ ತಪ್ಪಿನಿಂದ ಆಗಿರುವ ಅಚಾತುರ್ಯಕ್ಕೆ 78 ಸಾವಿರ ಆಸ್ತಿ ಮಾಲೀಕರು ತೆರಿಗೆ ಪಾವತಿ ಮಾಡಿಲ್ಲ, ಎರಡರಿಂದ ಮೂರು ಪಟ್ಟು ದುಬಾರಿ ದಂಡ ವಿಧಿಸಿದೆ ಎಂದು ದೂರಿದರು.
ಬಿ.ಬಿ.ಎಂ.ಪಿ.ಕೇಂದ್ರ ಕಚೇರಿಯಲ್ಲಿ ಗುರುವಾರ ಮುಖ್ಯ ಆಯುಕ್ತ ಗೌರವ್ ಗುಪ್ತಾ ರನ್ನು ಮಾಜಿ ಮಹಾಪೌರರಾದ ಎಂ.ರಾಮಚಂದ್ರಪ್ಪ, ಕಾಂಗ್ರೆಸ್ ಮುಖಂಡ ಎಸ್.ಮನೋಹರ್, ವಿ.ಶಂಕರ್, ಮಾಜಿ ಮಹಾನಗರ ಪಾಲಿಕೆ ಸದಸ್ಯ ರಿಜ್ಞಾನ್ ನವಾಬ್, ಪ್ರಚಾರ ಸಮಿತಿ ಅಧ್ಯಕ್ಷ ಆನಂದ್ ಮತ್ತು ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ತೆರಿಗೆ ಮರುಪರೀಲನೆ ಮಾಡವ ಬಗ್ಗೆ ಮನವಿ ಪತ್ರ ಸಲ್ಲಿಸಿದರು.
ಆಸ್ತಿ ಮಾಲೀಕರಿಂದ 120 ಕೋಟಿ ರೂ. ತೆರಿಗೆ ಬಾಕಿ ಬರಬೇಕಾಗಿದ್ದು, ಅದಕ್ಕೆ 240 ರೂ. ಕೋಟಿ ಬಡ್ಡಿ ಹಾಕಿದ್ದಾರೆ. ಈ ಮೂಲಕ ಪಾಲಿಕೆ ಅಧಿಕಾರಿಗಳು ತೆರಿಗೆ ಹೆಸರಿನಲ್ಲಿ ಜನಗಳಿಂದ ಹೆಚ್ಚುವರಿ ತೆರಿಗೆ ವಿಧಿಸಲು ಮುಂದಾಗಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು ಮಾತನಾಡಿ ಕೂಡಲೇ ಅವೈಜ್ಞಾನಿಕವಾಗಿ ತೆರಿಗೆ ವಿಧಿಸಿರುವುದನ್ನು ಹಿಂತೆಗೆದುಕೊಳ್ಳಬೇಕು ಇಲ್ಲವಾದಲ್ಲಿ ಕೆಪಿಸಿಸಿ ವತಿಯಿಂದ ಬಿಬಿಎಂಪಿ ಕೇಂದ್ರ ಕಚೇರಿ ಮುಂದೆ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಸಾರಿಗೆ ಸಂಸ್ಥೆಯ ಅಂತರ್ ನಿಗಮ ವರ್ಗಾವಣೆ ಸಂಭವನೀಯ ಪಟ್ಟಿ ಪ್ರಕಟ