Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

2 ರಿಂದ 17 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಪ್ರಾರಂಭಿಸಲು ಬಿಬಿಎಂಪಿ ಚಿಂತನೆ

2 ರಿಂದ 17 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಪ್ರಾರಂಭಿಸಲು ಬಿಬಿಎಂಪಿ ಚಿಂತನೆ
bangalore , ಶುಕ್ರವಾರ, 15 ಅಕ್ಟೋಬರ್ 2021 (20:45 IST)
2 ರಿಂದ 17 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಪ್ರಾರಂಭಿಸಲು ಬಿಬಿಎಂಪಿ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಮಕ್ಕಳ ಸರ್ವೆ ಕಾರ್ಯ ಮಾಡಲಾಗಿದೆ ಎಂದು ಪಾಲಿಕೆ ಮುಖ್ಯ ಆಯುಕ್ತಗೌರವ್ ಗುಪ್ತ ಹೇಳಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕೆ ಹಾಕಲು ಆರಂಭಿಸಿದಾಗ ಯಾವುದೇ ರೀತಿಯ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
 
ಇನ್ನು ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪ್ರಭಾವ ಬೀರಲಿದೆ ಎಂದು ತಜ್ಞರು ತಿಳಿಸಿದ್ದು, ಇದರಿಂದ ಮಕ್ಕಳಿಗೆ ಸೋಂಕು ಹರಡುವುದನ್ನು ತಡೆಯಲು ಪಾಲಿಕೆ ಕಾರ್ಯತಂತ್ರ ರೂಪಿಸಿದೆ. ಹೀಗಾಗಿ ಸರ್ಕಾರ ಹಾಗೂ ಬಿಬಿಎಂಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಇನ್ನೂ ಕೇಂದ್ರ ಸರ್ಕಾರ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಬಹುದು ಎಂದು ಸೂಚನೆ ನೀಡಿದ್ದು, 2-17 ವರ್ಷದ ಮಕ್ಕಳ ಸರ್ವೇ ಕಾರ್ಯ ಮಾಡಲಾಗಿದೆ. ಮೊದಲ ಹಂತದಲ್ಲಿ 12 ವರ್ಷದಿಂದ 17 ವರ್ಷದ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ ಎಂದು  ತಿಳಿಸಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರದ ಕಾರ್ಯದರ್ಶಿ ಚಿರಂಜೀವ್ ಸಿಂಗ್ ರ ಕೃತಿ "ಯಾವ ಜನ್ಮದ ಮೈತ್ರಿ": ನಗರದಲ್ಲಿ ಸಂವಾದ