ಬೆಂಗಳೂರಿನ 2 ಶಾಲೆಯ ಮಕ್ಕಳಲ್ಲಿ ಕೂರೂನಾ ಸೋಂಕು ಪತ್ತೆಯಾದ ಹಿನ್ನೆಲೆ ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಕೊರೊನಾ ಮಾರ್ಗಸೂಚಿ ಪ್ರಕಟ ಮಾಡಿದೆ. ಮಾರ್ಗಸೂಚಿಯಲ್ಲಿ ಮಕ್ಕಳು, ಪೋಷಕರಿಗೆ ಮುಂಜಾಗ್ರತಾ ಕ್ರಮವಹಿಸಬೇಕು. ಕೊವಿಡ್ ಲಕ್ಷಣ ಕಂಡುಬಂದ ಕೂಡಲೇ ವೈದ್ಯಕೀಯ ಪರೀಕ್ಷೆ ಮಾಡಿಸಬೇಕು. ಫಲಿತಾಂಶ ಬರುವವರೆಗೂ ಮಕ್ಕಳನ್ನು ಪ್ರತ್ಯೇಕವಾಗಿ ಇರಿಸಬೇಕು. ಶಾಲೆಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ ಪಾಲನೆ ಮಾಡಬೇಕು. ಶಾಲೆಗಳ ಪ್ರವೇಶ ದ್ವಾರದಲ್ಲಿ ಧರ್ಮಲ್ ಸ್ಟೀನಿಂಗ್ ಕಡ್ಡಾಯವಾಗಿ ಮಾಡಬೇಕು. ಮನೆಯಲ್ಲಿರುವ ಎಲ್ಲರೂ ಕೋವಿಡ್-19 ಲಸಿಕೆ ಹಾಕಿಸಿಕೊಳ್ಳಬೇಕು. ಪೋಷಕರು, ಮಕ್ಕಳಲ್ಲಿ ರೋವಿಡ್ ಲಕ್ಷಣ ಕಂಡು ಬಂದಲ್ಲಿ ಟೆಸ್ಟ್ ಮಾಡಿಸಿಕೊಳ್ಳಬೇಕು, ಮಕ್ಕಳಿಗೆ ಕೊಲೊನಾ ಟೆಸ್ಟ್ ಮಾಡಿಸಿದಲ್ಲಿ ಫಲಿತಾಂಶ ಬರುವವರೆಗೂ ಶಾಲೆಗೆ ಕಳುಹಿಸಬೇಡಿ, ಮನೆಯಲ್ಲಿರುವ ಎಲ್ಲಾ ಅರ್ಹ ಮಕ್ಕಳು ಕೋವಿಡ್-19 ಲಸಿಕ ಪಡೆಯಲು ಪ್ರೇರೇಪಿಸುವುದು, ಮನೆಯಲ್ಲಿರುವ ಹಿರಿಯ ಸದಸ್ಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಿಳಿಸಿದ್ದಾರೆ.