Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕೊರೊನಾ ಮತ್ತು ಓಮಿಕ್ರಾನ್ ಅಲೆಯನ್ನು ಎದುರಿಸಲು ಬಿಬಿಎಂಪಿ ಸರ್ವ ಸನ್ನದ್ಧವಾಗಿದೆ. ನಗರದಲ್ಲಿ 28,067 ಬೆಡ್ಗಳ ವ್ಯವಸ್ಥೆಯನ್ನ ಮಾಡಿಕೊಂಡಿದ್ದು, ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್ ಸಿದ್ಧವಾಗಿವೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿ ತರಿಗೆ 3237 ಬೆಡ್ಗಳು, ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 2696 ಹಾಸಿಗೆಗಳು ಸಿದ್ಧವಾಗಿದ್ದು, ಸದ್ಯ ಖಾಸಗಿ ಆಸ್ಪತ್ರೆಗಳಲ್ಲೂ ಕೂಡ ಬೆಡ್ಗಳು ರೆಡಿಯಾಗಿವೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ದರ ಕೂಡ ನಿಗದಿ ಮಾಡಿದೆ. ದರ ನಿಗದಿ ಉಲ್ಲಂಘಿಸಿದರೆ ಸರ್ಕಾರದಿಂದ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಲಾಗುವುದು ಅಂತ ಬಿಬಿಎಂಪಿ ಎಚ್ಚರಿಕೆ ನೀಡಿದೆ.