ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದು, ನವೆಂಬರ್ 8 ರಿಂದ ಕೋವಿಡ್ ಮಾರ್ಗಸೂಚಿ ಅನುಸರಿಸುವ ಷರತ್ತಿಗೊಳಪಟ್ಟು ಶಿಶುವಿಹಾರ, ಪ್ಲೇ ಹೋಂ ಕೇಂದ್ರ ತೆರೆಯಲು ಬಿಬಿಎಂಪಿ ಅನುಮತಿ ನೀಡಿದೆ ಎಂದು ಆದೇಶಿಸಿದ್ದಾರೆ.ಶಿಶುವಿಹಾರದ ಮತ್ತು ಆಟದ ಮನೆಯ ಕೇಂದ್ರದ ಶಿಕ್ಷಕರು/ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು, ಈ ಬಗ್ಗೆ ಪಾಲಿಕೆ ವಲಯದ ಆರೋಗ್ಯಾಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು, ಶಿಶುವಿಹಾರ ಮತ್ತು ಆಟದ ಮೈದಾನವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು ಎಂದು ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಶಿಶುವಿಹಾರ, ಪ್ಲೇ ಹೋಂ ಕೇಂದ್ರ ಆರಂಭಕ್ಕೆ ಬಿಬಿಎಂಪಿ ಗ್ರೀನ್ ಸಿಗ್ನಲ್ ನೀಡಿದೆ.