Webdunia - Bharat's app for daily news and videos

Install App

ಬಿಡಿಎ ಜಾಗ ವಶ

Webdunia
ಮಂಗಳವಾರ, 28 ಜೂನ್ 2022 (20:25 IST)
ಬೆಳ್ಳಂಬೆಳಗ್ಗೆ ಬಿಡಿಎ ಅಧಿಕಾರಿಗಳು ಜೆಸಿಬಿಗಳನ್ನು ಬಳಸಿ ಬಿಡಿಎಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದ್ದ 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ತೆರವುಗೊಳಿಸಿ, ಸುಮಾರು 100 ಕೋಟಿ ಮೌಲ್ಯದ ಒಂದೂಕಾಲು ಎಕರೆ ಜಾಗವನ್ನು ವಶಕ್ಕೆ ಪಡೆದಿದ್ದಾರೆ. ನಗರದ ಎಚ್ ಬಿಆರ್ ಬಡಾವಣೆಯ 2 ನೇ ಹಂತದ ನಾಗವಾರದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡ ಸರ್ವೆ ನಂಬರ್ 75 ರ ಒಂದೂಕಾಲು ಎಕರೆ ಜಾಗವನ್ನು ಬಿಟ್ಟುಕೊಡದೇ ಭೂಮಾಲೀಕರು ಆ ಜಾಗದಲ್ಲಿ 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ನಿರ್ಮಿಸಿದ್ದರು. ಹಲವು ಬಾರಿ ಬಿಡಿಎ ಎಚ್ಚರಿಕೆ ನೀಡಿದ್ದರೂ ತೆರವು ಮಾಡಿರಲಿಲ್ಲ.ಈ ಹಿನ್ನೆಲೆಯಲ್ಲಿ ಇಂದು ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಭಾಸ್ಕರ್ ಮತ್ತು ರವಿಕುಮಾರ್ ನೇತೃತ್ವದಲ್ಲಿ ಕಾರ್ಯಪಾಲಕ ಇಂಜಿನಿಯರ್ ಜಿ.ಕುಮಾರ್ ಅವರನ್ನೊಳಗೊಂಡ ಅಧಿಕಾರಿಗಳ ತಂಡವು 200 ಪೊಲೀಸ್  ರ  ನೆರವಿನಿಂದ 15 ಕ್ಕೂ ಹೆಚ್ಚು ಜೆಸಿಬಿಗಳನ್ನು ಬಳಸಿ 15 ವಾಣಿಜ್ಯ ಮಳಿಗೆಗಳು ಹಾಗೂ ಶೆಡ್ ಗಳನ್ನು ನೆಲಸಮ ಮಾಡಿ ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ರಾಯಚೂರು ಸಚಿವ ಸ್ಥಾನ ಸಿಗದ ಬೇಸರಕ್ಕೆ ಮಹತ್ವದ ನಿರ್ಧಾರ ಘೋಷಿಸಿದ ಬಸನಗೌಡ ದದ್ದಲ್

ಮುಂದಿನ ಸುದ್ದಿ
Show comments