Webdunia - Bharat's app for daily news and videos

Install App

ಮಹಿಳೆಯರೇ ಫೇಸ್ ಬುಕ್ ನಲ್ಲಿ ಪರಿಚಯವಿಲ್ಲದವರನ್ನು ಫ್ರೆಂಡ್ ಮಾಡಿಕೊಳ್ಳುವ ಮುನ್ನ ಎಚ್ಚರ

Webdunia
ಶನಿವಾರ, 15 ಡಿಸೆಂಬರ್ 2018 (07:25 IST)
ಬೆಂಗಳೂರು : ಮಹಿಳೆಯೊಬ್ಬಳು ಫೇಸ್ ಬುಕ್ ಫ್ರೆಂಡ್ ವೊಬ್ಬನನ್ನು ನಂಬಿ ಆತನಿಂದ ವಂಚನೆಗೆ ಒಳಗಾಗಿರುವ ಘಟನೆ ಬೆಂಗಳೂರಿನ ಯಶವಂತಪುರದಲ್ಲಿ ನಡೆದಿದೆ.


ಮಹಿಳೆಗೆ ವಾದಿರಾಜ್ ಎನ್ನುವ ವ್ಯಕ್ತಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದನು. ಮಹಿಳೆ ಆತ ಯಾರೆಂದು ನೋಡದೆ ಆತನ ಫ್ರೆಂಡ್ ರಿಕ್ವೆಸ್ಟ್ ನ್ನು ಅಕ್ಸೆಪ್ಟ್ ಮಾಡಿಕೊಂಡು ಆತನ ಜೊತೆ ಮೆಸೆಂಜರ್ ನಲ್ಲಿ ಚಾಟ್ ಮಾಡಲು ಶುರುಮಾಡಿದ್ದಾಳೆ.  


ನಂತರ ಆತನ ಮಾತುಗಳಿಗೆ ಮರುಳಾದ ಮಹಿಳೆಗೆ ಆತ ಮದುವೆಯಾಗುವುದಾಗಿ ಭರವಸೆ ಕೊಟ್ಟು, ಆಕೆಯನ್ನು ಲಾಡ್ಜ್ ಗೆ ಕರೆಸಿಕೊಂಡಿದ್ದಾನೆ. ಅಲ್ಲದೇ ಮದುವೆಯಾಗ್ತಿದ್ದೇವೆ ಮನೆಬೇಕು ಹಣ ಬೇಕು ಎಂದು ಹೇಳಿ ಆಕೆಯಿಂದ ಹಣವನ್ನು ಕೂಡ ತೆಗೆದುಕೊಂಡಿದ್ದಾನೆ. ಅಲ್ಲದೇ ಕಡಿಮೆ ಬೆಲೆಗೆ ಸೈಟ್ ಕೊಡಿಸುವುದಾಗಿ ಹೇಳಿ ಆಕೆಯ ಸಂಬಂಧಿಕರಿಂದಲೂ ಹಣವನ್ನು ಕೊಳ್ಳೆ ಹೊಡೆದು ಪರಾರಿಯಾಗಿದ್ದಾನೆ.


ಮಹಿಳೆಗೆ ಮೋಸ ಹೋಗಿರೋದು ಗೊತ್ತಾದ ನಂತರ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದ ಪೊಲೀಸರು ವಿಚಾರಣೆಗೊಳಪಡಿಸಿದ್ದಾಗ ಆತನ ನಿಜ ಹೆಸರು ಸತೀಶ್ ಎಂಬುದಾಗಿಯೂ, ಹಾಗೇ ಹಲವಾರು ಫೇಸ್‍ಬುಕ್ ಅಕೌಂಟ್‍ಗಳಿಂದ ಸತೀಶ್ 30ಕ್ಕೂ ಹೆಚ್ಚು ಮಹಿಳೆಗೆ ಇದೇ ರೀತಿಯಾಗಿ ವಂಚನೆ ಮಾಡಿದ್ದಾನೆ ಎಂಬುದಾಗಿಯೂ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments