ಕುತೂಹಲ ಕೆರಳಿಸಿದ್ದ ಬೆಳಗಾವಿ ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. ಶಾಸಕ ಸತೀಶ್ ಜಾರಕಿಹೊಳಿ ನೇತೃತ್ವದ ಬಣಕ್ಕೆ ಅಧ್ಯಕ್ಷ ಹುದ್ದೆ ಲಭಿಸಿದೆ.
ಬೆಳಗಾವಿ ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧ ಆಯ್ಕೆ ಬಹುತೇಕ ಖಚಿತ ಎನ್ನಲಾಗಿದೆ.
ಶಾಸಕ ಸತೀಶ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮಧ್ಯೆ ರಾಜೀ ಸಂಧಾನ ನಡೆಸಲಾಗಿದೆ.
ಹೈ ಕಮಾಂಡ್ ಸೂಚನೆ ಮತ್ತು ಪಕ್ಷದ ಹಿತಕ್ಕಾಗಿ ಅವಿರೋಧ ಆಯ್ಕೆ ನಡೆಸಲಾಗಿದೆ.
ಅಧ್ಯಕ್ಷ ಸ್ಥಾನ ಸತೀಶ ಜಾರಕಿಹೊಳಿ ಬಣಕ್ಕೆ, ಉಪಾಧ್ಯಕ್ಷ ಸ್ಥಾನ ಹೆಬ್ಬಾಳಕರ ಬಣಕ್ಕೆ ಲಭಿಸಿದಂತಾಗಿದೆ.
ಅಧ್ಯಕ್ಷರಾಗಿ ಆನಂದ ಪಾಟೀಲ, ಉಪಾಧ್ಯಕ್ಷ ರಾಗಿ ಸುಧೀರ ಗಡ್ಡೆ ಆಯ್ಕೆ ಖಚಿತ ಎಂದೇ ಹೇಳಲಾಗುತ್ತಿದೆ.
ಎಪಿಎಂಸಿ ಚುನಾವಣೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಬ್ಬರೇ ನಾಮಪತ್ರ ಸಲ್ಲಿಸಲಿದ್ದಾರೆ. ಹೀಗಾಗಿ ಎಪಿಎಂಸಿ ಚುನಾವಣೆ ಸುಖಾಂತ್ಯಗೊಂಡಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.