Publish Date: Sun, 14 Oct 2018 (15:45 IST)
Updated Date: Sun, 14 Oct 2018 (15:47 IST)
ಬಳ್ಳಾರಿ ಬಿಜೆಪಿಯಲ್ಲಿ ಭಿನ್ನಮತ ಕಾಣಿಸಿಕೊಂಡಿದೆ. ಟಿಕೆಟ್ ಕೈತಪ್ಪುವ ಭೀತಿ ಹಿನ್ನಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳು ಬಂಡಾಯದ ಬಾವುಟ ಹಾರಿಸಿದ್ದು, ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ನಾನು ಕಳೆದ ಐದಾರು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯನಾಗಿದ್ದೇನೆ. ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿಗೆ ಕೊಡುಗೆ ಕೊಟ್ಟಿದ್ದೇನೆ. ಮೂರ್ನಾಲ್ಕು ಬಾರಿ ನನಗೆ ಬೇರೆ, ಬೇರೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದೆ. ಹಾಗಾಗಿ ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಿದ್ದೇನೆ ಎಂದು ಡಾ.ಶ್ರೀನಿವಾಸ್ ಹೇಳಿದ್ದಾರೆ.
ನಿಷ್ಠಾವಂತವಾದ ನನಗೆ, ಶಿಸ್ತಿನ ಪಕ್ಷದಲ್ಲಿ ಟಿಕೆಟ್ ದೊರಕಿಲ್ಲ. ನಿಷ್ಠಾವಂತರಿಗೆ ಬಿಜೆಪಿ ಗುರುತಿಸಿ ಕೆಲಸ ಮಾಡುವವರಿಗೆ ಟಿಕೆಟ್ ನೀಡಬೇಕಿತ್ತು. ಆದರೆ ನೀಡಿಲ್ಲ. ಬಳ್ಳಾರಿ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಹೆಚ್ಚಾಗುತ್ತಿದೆ ಎಂದು ದೂರಿದರು. ಸೋಮವಾರ ಬೆಳಗ್ಗೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ ಅವರು, ನನ್ನ ವೈದ್ಯಕೀಯ ಸೇವೆ ಬಳ್ಳಾರಿ ಜಿಲ್ಲೆಯಾದ್ಯಾಂತ ನಡೆಸುತ್ತಿದ್ದೇನೆ. ನನಗೆ ಜನರೊಂದಿಗೆ ಒಡನಾಟವಿದೆ. ಜನರ ಸೇವೆ ಮಾಡುತ್ತೇನೆ ಎಂದಿದ್ದಾರೆ.