Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಾಳೆಯಿಂದ ಬೆಂಗಳೂರು- ಮಂಗಳೂರು ರೈಲು ರದ್ದು

ನಾಳೆಯಿಂದ ಬೆಂಗಳೂರು- ಮಂಗಳೂರು ರೈಲು ರದ್ದು
bangalore , ಬುಧವಾರ, 13 ಡಿಸೆಂಬರ್ 2023 (14:21 IST)
ನಾಳೆಯಿಂದ ಬೆಂಗಳೂರು- ಮಂಗಳೂರು ರೈಲು ರದ್ದಾಗಲಿದೆ.ಡಿಸೆಂಬರ್ 14 ರಿಂದ ಡಿಸೆಂಬರ್ 22ರ ವರೆಗೆ ರೈಲು ಸಂಚಾರ ರದ್ದಾಗಲಿದ್ದು,ಹಾಸನ ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಯಾರ್ಡ್ ಮರು ನಿರ್ಮಾಣ ಕಾಮಗಾರಿಗಾಗಿ ನಾಳೆಯಿಂದಲೇ ಮಂಗಳೂರು- ಬೆಂಗಳೂರು ರೈಲು ಸಂಚಾರ ರದ್ದಾಗಲಿದ್ದು,ರೈಲು ಸಂಚಾರ ರದ್ದುಗೊಳಿಸುವುದರ ಬಗ್ಗೆ ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
 
 ಡಿಸೆಂಬರ್ 14 ರಿಂದ 18 ರ ಅವಧಿಯಲ್ಲಿ ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ,ಸಂಜೆ 6 ರಿಂದ ರಾತ್ರಿ 8 ರವರೆಗೆ ಲೈನ್ ಬ್ಲಾಕ್, ಸಿಗ್ನಲ್ ಮತ್ತು ದೂರಸಂಪರ್ಕ ಬ್ಲಾಕ್ ಜಾರಿಯಲ್ಲಿರಲಿದೆ.ಈ ಸಮಯದಲ್ಲಿ ರೈಲು ಸಂಚಾರಕ್ಕೆ ಹಾಸನದಲ್ಲಿ ಯಾವುದೇ ರೈಲು ಮಾರ್ಗಗಳು ಲಭ್ಯವಿರುವುದಿಲ್ಲ.ಡಿಸೆಂಬರ್ 19 ರಿಂದ ಡಿಸೆಂಬರ್ 22 ರವರೆಗೆ ಎಂಜಿನಿಯರಿಂಗ್ ಕೆಲಸಕ್ಕಾಗಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಟ್ರಾಫಿಕ್ ಬ್ಲಾಕ್ ಆಗಲಿದೆ.ಈ ಅವಧಿಯಲ್ಲಿ ಯಾವುದೇ ರೈಲುಗಳು ಕಾರ್ಯ ನಿರ್ವಹಿಸುವುದಿಲ್ಲ ಈ ಬಗ್ಗೆ  ನೈರುತ್ಯ ರೈಲ್ವೆ ಸ್ಪಷ್ಟನೆ ನೀಡಿದೆ.
 
ರಾಜ್ಯ ರಾಜಧಾನಿ ಮತ್ತು ಕರಾವಳಿಗೆ ಸಂಪರ್ಕ ಕಲ್ಪಿಸುವ ಎರಡು ಪ್ರಮುಖ ಸೇವೆಗಳು ರದ್ದಾಗಿದ್ದು,ಬೆಂಗಳೂರು- ಕಣ್ಣೂರು- ಬೆಂಗಳೂರು ಮತ್ತು ಬೆಂಗಳೂರು- ಕಾರವಾರ- ಬೆಂಗಳೂರು ಪಂಚಗಂಗಾ ರದ್ದಾಗಲಿದೆ.ರೈಲು ಸಂಖ್ಯೆ 16511,ಬೆಂಗಳೂರು-ಕಣ್ಣೂರು,ರೈಲು ಸಂಖ್ಯೆ 16595,ಬೆಂಗಳೂರು- ಕಾರವಾರ ಪಂಚಗಂಗಾ ಎಕ್ಸ್ಪ್ರೆಸ್  ಡಿ.16 ರಿಂದ ಡಿ.20ರ ವರೆಗೆ ರದ್ದಾಗಲಿದೆ.ಯಶವಂತಪುರ-ಮಂಗಳೂರು ಜಂಕ್ಷನ್ ಗೊಮ್ಮಟೇಶ್ವರ (ವಾರಕ್ಕೆ ಮೂರು ದಿನ ಸಂಚರಿಸುವ) ಎಕ್ಸ್ಪ್ರೆಸ್, ಡಿಸೆಂಬರ್ 14, 17, 19 ಮತ್ತು 21 ರವರೆಗೆ ರದ್ದಾಗಲಿದೆ.ಯಶವಂತಪುರ-ಕಾರವಾರ (ವಾರಕ್ಕೆ ಮೂರು ದಿನ ಸಂಚರಿಸುವ) ಎಕ್ಸ್ಪ್ರೆಸ್ – ಡಿಸೆಂಬರ್ 13, 15, 18, 20 ಮತ್ತು 22 ರಂದು ರದ್ದಾಗಲಿದೆ.ಯಶವಂತಪುರ-ಮಂಗಳೂರು ಜಂಕ್ಷನ್ ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16539) – ಡಿಸೆಂಬರ್ 16 ರಂದು ರದ್ದಾಗಲಿದೆ.ಮಂಗಳೂರು ಜಂಕ್ಷನ್-ಯಶವಂತಪುರ ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16540) – ಡಿಸೆಂಬರ್ 17 ರಂದು ರದ್ದಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಭವನಕ್ಕೆ ಬಾಂಬ್ ಇಟ್ಟ ಆರೋಪಿಯ ಬಂಧನ