Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಮನೆ ಸೇರುವ ಮುನ್ನ ಈ ವಿಚಾರಗಳ ಬಗ್ಗೆ ಎಚ್ಚರಿಕೆಯಿರಲಿ

Bangalore Rains

Krishnaveni K

ಬೆಂಗಳೂರು , ಮಂಗಳವಾರ, 22 ಅಕ್ಟೋಬರ್ 2024 (15:51 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಬೆಳಿಗ್ಗೆ ಬಿಡುವು ನೀಡಿದ್ದ ಮಳೆ ಇದೀಗ ಅಪರಾಹ್ನ ಮತ್ತೆ ಪ್ರತ್ಯಕ್ಷನಾಗಿದ್ದಾನೆ. ಮಧ್ಯಾಹ್ನದ ನಂತರ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಕಚೇರಿ ಬಿಟ್ಟು ಮನೆ ಸೇರುವ ಮುನ್ನ ಎಚ್ಚರಿಕೆ ವಹಿಸುವುದು ಸೂಕ್ತ.

ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯೂ ಭಾರೀ ಮಳೆಯಾಗಿತ್ತು. ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವು ರಸ್ತೆಗಳು, ಮನೆಗಳು ಜಲಾವೃತವಾಗಿದೆ. ಸಕಾಲದಲ್ಲಿ ಮಳೆಯಾಗದೇ ಈಗ ಅಸಮಯದಲ್ಲಿ ಮಳೆಯಾಗುತ್ತಿರುವುದರಿಂದ ಜನ ಪರದಾಡುವಂತಾಗಿದೆ.

ಇಂದು ಮಧ್ಯಾಹ್ನದಿಂದ ಭಾರೀ ಮಳೆಯಾಗುತ್ತಿದೆ. ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ನಿನ್ನೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ ಮಳೆ ಬಿಡುವು ನೀಡಿದ್ದರಿಂದ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿವೆ.

ಆದರೆ ಶಾಲಾ ಮಕ್ಕಳು ಮನೆಗೆ ತೆರಳುವ ವೇಳೆ ಭಾರೀ ಮಳೆಯಾಗಿದ್ದು ಮಕ್ಕಳನ್ನು ಕರೆದೊಯ್ಯುವುದೇ ಕಷ್ಟವಾಗಿದೆ. ಮಳೆಯಿಂದಾಗಿ ರಸ್ತೆ, ಚರಂಡಿ ಎಲ್ಲಾ ಕಡೆ ನೀರೋ ನೀರು ಎನ್ನುವ ಪರಿಸ್ಥಿತಿಯಿದೆ. ಹೀಗಾಗಿ ಮಕ್ಕಳನ್ನು ಮನೆಗೆ ಕರೆದೊಯ್ಯುವಾಗ ಎಚ್ಚರಿಕೆಯಿರಲಿ. ಕಚೇರಿಯಿಂದ ಮನೆಗೆ ತೆರಳುವವರೂ ಆದಷ್ಟು ಮಳೆ ಬಿಡುವು ಇರುವ ಸಮಯದಲ್ಲೇ ತೆರಳುವುದು ಉತ್ತಮ.
 

Share this Story:

Follow Webdunia kannada

ಮುಂದಿನ ಸುದ್ದಿ

ಕಷ್ಟಪಟ್ಟ ಟಿಬಿ ಡ್ಯಾಮ್ ಗೇಟ್ ಅಳವಡಿಸಿದವರಿಗೆ ರಾಜ್ಯ ಸರ್ಕಾರ ದುಡ್ಡೂ ಕೊಟ್ಟಿಲ್ಲ