Webdunia - Bharat's app for daily news and videos

Install App

ಬೆಂಗಳೂರು: ಕಟ್ಟಡವೊಂದಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಪಕ್ಕದ ಎರಡು ಅಂತಸ್ತಿನ ಮನೆ ಕುಸಿತ

Sampriya
ಬುಧವಾರ, 19 ಫೆಬ್ರವರಿ 2025 (19:18 IST)
Photo Courtesy X
ಬೆಂಗಳೂರು: ಕಟ್ಟಡವೊಂದಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಪಕ್ಕದಲ್ಲಿದ್ದ ಎರಡು ಅಂತಸ್ತಿನ ಮನೆ ಕುಸಿದ ಘಟನೆ ಬೆಂಗಳೂರಿನ ಭೀಮಾ ನಗರದ ತಿಪ್ಪಸಂದ್ರದಲ್ಲಿ ನಡೆದಿದೆ.

ಕಟ್ಟಡದ ಪಕ್ಕದಲ್ಲಿ ಮತ್ತೊಂದು ಕಟ್ಟಡಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮನೆಯಲ್ಲಿದ್ದವರನ್ನು ಪೊಲೀಸರು ಹೊರಕ್ಕೆ ಕಳುಹಿಸಿದ್ದಾರೆ.

ಈ ಘಟನೆ ಇಂದು ಸಂಜೆ 4:15ರ ಸುಮಾರಿಗೆ ನಡೆದಿದೆ. ಕಟ್ಟಡದಲ್ಲಿ ಐದು ಬಾಡಿಗೆ ಮನೆಗಳಿದ್ದವು. ಕಟ್ಟಡ ಕುಸಿದ ವೇಳೆ ಮನೆಯಲ್ಲಿದ್ದವರು ಹೊರಗೆ ಓಡಿದ್ದಾರೆ.

ಬೇಸ್‌ಮೆಂಟ್‌ನಲ್ಲಿ ಐದಕ್ಕೂ ಹೆಚ್ಚು ಬೈಕ್‌ಗಳು ಜಖಂಗೊಂಡಿವೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ತಿಳಿದುಬಂದಿದೆ.

 ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಕಟ್ಟಡ ಮತ್ತಷ್ಟು ಕುಸಿಯುವ ಸಾಧ್ಯತೆಯಿದ್ದು, ಮನೆಯ ಎರಡೂ ಕಡೆ ಬ್ಯಾರಿಕೇಡ್‌ ಹಾಕಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಶಾಂತಿ ಮಾತುಕತೆ ಮಾಡೋಣ ಬನ್ನಿ: ಭಾರತದ ಎದುರು ಅಂಗಲಾಚುತ್ತಿರುವ ಪಾಕಿಸ್ತಾನ

Karnataka Weather: ಇಂದಿನಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments