Publish Date: Sat, 29 Jan 2022 (21:17 IST)
Updated Date: Sat, 29 Jan 2022 (21:19 IST)
ಕುಟ್ಟ ಭಾಗದ ರಾಜಕೀಯ ಮುಖಂಡ ಮುಕ್ಕಾಟೀರ ನವೀನ್ ಅಯ್ಯಪ್ಪ ರಾಜಿನಾಮೆ ಭಾರತೀಯ ಜನತಾ ಪಕ್ಷದ ಸ್ಥಳೀಯ ಮುಖಂಡರ ವರ್ತನೆಗೆ ಬೇಸತ್ತು ಪಕ್ಷದ ಸದಸ್ಯತ್ವಕ್ಕೆ ಹಾಗೂ ಪಕ್ಷದ ಜವಾಬ್ದಾರಿ ಸ್ಥಾನಕ್ಕೆ ಮುಕ್ಕಾಟೀರ ನವೀನ್ ಅಯ್ಯಪ್ಪ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿದ ಕುಟ್ಟ ಭಾಗದ ಮುಕ್ಕಾಟೀರ ನವೀನ್ ಅಯ್ಯಪ್ಪ, ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಶ್ರಮಿಸಿದ್ದೇನೆ.
ಇದೀಗ ಪಂಚಾಯತಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸ್ಥಳೀಯ ಬಿಜೆಪಿ ಮುಖಂಡರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ.
ಹೀಗಾಗಿ ರಾಜಿನಾಮೆ ನಿರ್ಧಾರ ಮಾಡಿರುವುದಾಗಿ ತಿಳಿಸಿದರು. ಅಲ್ಲದೆ ಬಿಜೆಪಿ ವಿರಾಜಪೇಟೆ ಮಂಡಲ ಸದಸ್ಯ ಸ್ಥಾನಕ್ಕೂ ರಾಜಿನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.
geetha
Publish Date: Sat, 29 Jan 2022 (21:17 IST)
Updated Date: Sat, 29 Jan 2022 (21:19 IST)