ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಆರಂಭಿಸಿ, ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಯಾತ್ರೆ ಸಾಗ್ತಿದ್ದು, ಕಾರ್ಯಕರ್ತರೊಂದಿಗೆ ಹೆಜ್ಜೆಹಾಕ್ತಿದ್ದಾರೆ. ಇಂದು ಮಹಾರಾಷ್ಟ್ರದ ಹಿಂಗೋಲಿಯ ಕಳಂನೂರಿನಿಂದ ಯಾತ್ರೆ ಪುನರಾರಂಭಗೊಂಡಿದೆ. ರಾಹುಲ್ ಜೊತೆ ಕಾಂಗ್ರೆಸ್ ಇತರ ನಾಯಕರು ಹೆಜ್ಜೆ ಹಾಕ್ತಿದ್ದಾರೆ. ಕಾಂಗ್ರೆಸ್ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಪಾದಯಾತ್ರೆ 66ನೇ ದಿನಕ್ಕೆ ಕಾಲಿಟ್ಟಿದೆ. ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಕೂಡಾ ಲೇಹ್‌ನಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ. ಈ ಮೂಲಕ ಈ 2 ಪಕ್ಷಗಳು ವಿಭಿನ್ನ ಸಿದ್ಧಾಂತಗಳೊಂದಿಗೆ ಒಟ್ಟಾಗಿ ಕಾರ್ಯಕ್ರಮಗಳನ್ನು ನಡೆಸಲು ಒಪ್ಪಿಕೊಂಡಿವೆ.