Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಭಾರತ್ ಜೋಡೋ ಯಾತ್ರೆ ಸೂತ್ರ ಹರಿದ ಗಾಳಿಪಟದಂತ ಒಂದು ವ್ಯರ್ಥ ಹಾರಾಟ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟೀಕಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಗೊತ್ತು- ಗುರಿ ಎರಡೂ ಇಲ್ಲದ ಈ ನಡಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ನಿಂದಿಸುವ ಏಕಮಾತ್ರ ಉದ್ದೇಶ ಹೊಂದಿರುವುದು ವಿಪರ್ಯಾಸ ಎಂದು ಹೇಳಿದ್ದಾರೆ.
ಅವಧಿಯಲ್ಲಿ ರಾಹುಲ್ ಗಾಂಧಿಯವರ ಪೂರ್ವಜರು ಎಲ್ಲೆಲ್ಲಿ ದೇಶವನ್ನು ಒಡೆದರೋ ಅದೆಲ್ಲವನ್ನೂ ಜತನದಿಂದ ಕಟ್ಟುವ ಕಾರ್ಯವನ್ನು ಆರೆಸ್ಸೆಸ್ ಮಾಡಿದೆ. ಈಗ ರಾಹುಲ್ ಗಾಂಧಿ ಕೂಡಿಸಿದ್ದನ್ನು ಕಳೆಯಲು ಹೊರಟಿದ್ದಾರೆ ಎಂಬುದೇ ಹೆಚ್ಚು ಸಮರ್ಪಕ ವ್ಯಾಖ್ಯಾನವಾದೀತು ಎಂದು ವ್ಯಂಗ್ಯವಾಡಿದ್ದಾರೆ. ರಾಹುಲ್ ಗಾಂಧಿಯವರ ಪಾದಯಾತ್ರೆಯ ಸದುದ್ದೇಶವನ್ನು ಅರ್ಥ ಮಾಡಿಕೊಳ್ಳುವ ಅಗತ್ಯವೇ ಇಲ್ಲ. ಇದೊಂದು ಶುದ್ಧ ರಾಜಕೀಯ ಅಜೆಂಡಾದ ವಿಭಜಕ ಮನಸುಗಳ ವಿಜೃಂಭಣೆಯ ನಡಿಗೆ ಎಂದು ಟೀಕಿಸಿದ್ದಾರೆ.