Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬಿಜೆಪಿ ಸರ್ಕಾರ ಎಸಿಬಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ನಮಗೊಂದು ಕಾನೂನು, ಬಿಜೆಪಿಯವರಿಗೊಂದು ಕಾನೂನಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಕಿಡಿ ಕಾರಿದ್ದಾರೆ.
ಜಮೀರ್ ಅಹಮದ್ ಖಾನ್ ವಿರುದ್ಧ ಎಸಿಬಿ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಸ್ಪೀಕರ್ ಅನುಮತಿಯಿಲ್ಲದೆ ಶಾಸಕ ಜಮೀರ್ ಮೇಲೆ ದಾಳಿ ಮಾಡಲಾಗಿದೆ.
ಅವರ ಪಕ್ಷದವರಿಗೆ ಮಾತ್ರ ಸ್ಪೀಕರ್ ಅನುಮತಿ ಕೇಳಿದ್ದಾರೆ. ಎಸಿಬಿಯನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದೊಂದೇ ಅಲ್ಲ ಎಲ್ಲಾ ಸ್ವಾಯತ್ತ ಸಂಸ್ಥೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.
ಪಿಎಸ್ ಐ ನೇಮಕಾತಿ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ರಾಮಲಿಂಗಾರೆಡ್ಡಿ ಆಕ್ರೋಶ ಹೊರ ಹಾಕಿ, ಸುಳ್ಳು ಅನ್ನೋದು ಬಿಜೆಪಿಯವರಿಗೆ ರಕ್ತಗತವಾಗಿದೆ. ಸಿದ್ದರಾಮಯ್ಯ ಕಾಲದಲ್ಲಿ ಅಕ್ರಮ ಅಂತಾರೆ. ಆಗ ಆಗಿದ್ದರೆ ಇವರು ಏನು ಮಾಡುತ್ತಿದ್ದರು? ಅನ್ಯಾಯ ಕೇಳಬೇಕಿತ್ತು. ಲೋಕಾಯುಕ್ತಕ್ಕೆ ದೂರು ನೀಡಬೇಕಿತ್ತು ಎಂದರು.