ಬೆಂಗಳೂರು : ರಾಜ್ಯದ 15 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಇದೀಗಸಿಎಂ ತವರು ಜಿಲ್ಲೆಯಾದ ಕೆ.ಆರ್.ಪೇಟೆಯಲ್ಲಿ ಕಮಲ ಅರಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ ಎನ್ನಲಾಗಿದೆ.
ಕೆ.ಆರ್.ಪೇಟೆಯ ಶಾಸಕರಾದ ನಾರಾಯಣಗೌಡ ಅವರನ್ನು ಅನರ್ಹರೆಂದು ಘೋಷಣೆ ಮಾಡಿದ್ದು,ಈ ಕುರಿತು ಇಂದು ಸುಪ್ರೀಂಕೋರ್ಟ್ ತೀರ್ಪು ಪ್ರಕಟವಾಗಲಿದೆ. ಸುಪ್ರೀಂಕೋರ್ಟ್ ನಾರಾಯಣ ಗೌಡ ಸ್ಪರ್ಧೆಗೆ ಅವಕಾಶ ನೀಡದಿದ್ದರೆ ಸಿಎಂ ಬಿಎಸ್ ವೈ ಪುತ್ರ ವಿಜಯೇಂದ್ರ ಸ್ಪರ್ಧೆಗೆ ಚಿಂತನೆ ನಡೆಸಲಾಗಿದೆ ಎಂದು ಬಿಜೆಪಿ ಮುಖಂಡ ಬೂಕಳ್ಳಿ ಮಂಜು ತಿಳಿಸಿದ್ದಾರೆ.
ಸಿಎಂ ಪುತ್ರ ವಿಜಯೇಂದ್ರ ಕಣಕ್ಕೀಳಿದರೆ ಗೆಲ್ಲುವ ಸಾಧ್ಯತೆ ಹೆಚ್ಚು. ಆದ್ದರಿಂದ ಅಭಿವೃದ್ಧಿ ದೃಷ್ಟಿಯಿಂದ ವಿಜಯೇಂದ್ರನಿಗೆ ಜನರು ಮಣೆ ಹಾಕುವ ನಿರೀಕ್ಷೆ ಇದೆ ಎನ್ನಲಾಗಿದೆ. ಒಂದು ವೇಳೆ ವಿಜಯೇಂದ್ರ ಸ್ಪರ್ಧಿಸದಿದ್ದರೆ ಬಿಜೆಪಿ ಮುಖಂಡ ಬೂಕಳ್ಳಿ ಮಂಜು ಕಣಕ್ಕೀಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.