ಬೆಂಗಳೂರು : ಮೈತ್ರಿ ಸರ್ಕಾರಕ್ಕೆ ಮತ್ತೆ ಬಿಗ್ ಶಾಕ್ ಎದುರಾಗಿದ್ದು, ಬರೋಬ್ಬರಿ 13 ಶಾಸಕರು ರಾಜೀನಾಮೆ ಕೊಡುವ ಸಾಧ್ಯತೆ ಇದೆ ಎಂಬ ಮಾಹಿತಿ ತಿಳಿದುಬಂದಿದೆ.
ಈಗಾಗಲೇ ಕಾಂಗ್ರೆಸ್ ನ ಇಬ್ಬರು ಶಾಸಕರಾದ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿ ಮೈತ್ರಿ ಸರ್ಕಾರದಲ್ಲಿ ತಲ್ಲಣ ಶುರುವಾಗಿದೆ. ಇದೀಗ ಮತ್ತೆ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿದಂತೆ 13ಕ್ಕೂ ಹೆಚ್ಚು ಅತೃಪ್ತ ಶಾಸಕರು ಇಂದು ರಾಜೀನಾಮೆ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಹಿರೇಕೆರೂರು ಶಾಸಕ ಬಿ.ಸಿಪಾಟೀಲ್, ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಮತ್ತು ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ರಾಜೀನಾಮೆ ಕೊಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಹಾಗೇ ಬೆಂಗಳೂರಿನ ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜು, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, ಹುಣಸೂರು ಶಾಸಕ ಎಚ್. ವಿಶ್ವನಾಥ್, ಕೆ.ಆರ್ ಪೇಟೆ ಶಾಸಕ. ನಾರಾಯಣ ಗೌಡ ಇವರೆಲ್ಲರೂ ಹೆಸರು ರಾಜೀನಾಮೆ ಪಟ್ಟಿಗೆ ಹೊಸದಾಗಿ ಸೇರಿಕೊಂಡಿದೆ ಎನ್ನಲಾಗಿದೆ. ಈ ಸುದ್ದಿ ಕೇಳಿಬಂದ ಹಿನ್ನಲೆಯಲ್ಲಿ ಈಗಾಗಲೇ ಕಾಂಗ್ರೆಸ್ ನಾಯಕರು ಶಾಸಕರನ್ನು ಭೇಟಿ ಮಾಡಿ ಮನವೊಲಿಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.