Publish Date: Tue, 04 Feb 2020 (09:46 IST)
Updated Date: Tue, 04 Feb 2020 (09:48 IST)
ಬೆಂಗಳೂರು : ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಪೊಲೀಸ್ ಪೇದೆಯೊಬ್ಬರು ಸಾವನಪ್ಪಿದ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ನಡೆದಿದೆ.
ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕೆಲಸ ಮಾಡುತ್ತಿದ್ದ ಭಕ್ತರಾಮ್ ಮೃತಪಟ್ಟ ವ್ಯಕ್ತಿ. ಇವರು ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ಬರುತ್ತಿರುವಾಗ ಈ ಘಟನೆ ನಡೆದಿದೆ. ಲಾರಿಯೊಂದು ವೇಗವಾಗಿ ಬಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಲ್ಲಿದ್ದ ಕಲ್ಲೊಂದು ಸಿಡಿದಿದ್ದು, ಇದರಿಂದ ಹಿಂದಿನಿಂದ ಬರುತ್ತಿದ್ದ ಭಕ್ತರಾಮ್ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಭಕ್ತರಾಮ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡೊಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಯಶವಂತಪುರ ಸಂಚಾರಿ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.