Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹೊನ್ನಾವರದ ಪರೇಶ್ ಮೇಸ್ತಾನದ್ದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ಹೊನ್ನಾವರದ ನ್ಯಾಯಾಲಯಕ್ಕೆ ಸಿಬಿಐ ವರದಿ ಸಲ್ಲಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ,
ಆಕಸ್ಮಿಕ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿಯ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿ ಅವರಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ. ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದಿದ್ದಾರೆ.