ಮೈಸೂರು ಮೃಗಾಲಯದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು ಒಂದು ತಿಂಗಳ ಕಾಲ ಬಂದ್ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದರು.
ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ತೆಗೆದು ಕೊಂಡಿರುವ ಮುಂಜಾಗೃತ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಮೃಗಾಲಯದ ಕಾರ್ಯ ನಿರ್ವಾಹಕ ನಿರ್ದೇಶಕರು ಮತ್ತು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು. ಈ ಕುರಿತು ನಾಳೆ ಬೆಂಗಳೂರಿನಲ್ಲಿ ಸಭೆ ಕರೆದು ಮತ್ತೊಂದು ಸುತ್ತಿನ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ.
ಹಕ್ಕಿಜ್ವರದಿಂದ ಇದುವರೆಗೂ ಯಾವುದೇ ಪ್ರಾಣಿಪಕ್ಷಿಗಳು ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಇದೇ ಮೊದಲ ಬಾರಿಗೆ ವಿಶ್ವವಿಖ್ಯಾತ ಮೈಸೂರು ಮೃಗಾಲಯದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡು ಪ್ರಾಣಿಪ್ರಿಯರಲ್ಲಿ ಆತಂಕ ಮೂಡಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.