ಬೆಂಗಳೂರು : ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣವನ್ನೂ ಮರು ಪರಿಶೀಲನೆ ಮಾಡುತ್ತೇವೆ. ಬಿಜೆಪಿಯವರು ಈಗಲೇ ಕುಣಿದಾಡ್ತಿದ್ದಾರೆ. ನಮ್ಮ ಸರ್ಕಾರ ಬಂದು 20 ದಿನ ಆಗಿದೆ ಅಷ್ಟೇ. ಅವರು ಸ್ವಲ್ಪ ಸಮಾಧಾನವಾಗಿರುವುದು ಒಳ್ಳೆಯದು. ಬಿಟ್ ಕಾಯಿನ್ ಪ್ರಕರಣವನ್ನೂ ಮರು ಪರಿಶೀಲನೆ ಮಾಡ್ತೇವೆ ಎಂದು ತಿಳಿಸಿದ್ದಾರೆ.
ಸುರ್ಜೇವಾಲ ಅಧಿಕಾರಿಗಳ ಸಭೆ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಅಧಿಕೃತ ಸಭೆ ಆಗಿರಲಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು. ಆ ವೇಳೆ ರಣದೀಪ್ ಸಿಂಗ್ ಸುರ್ಜೇವಾಲ ಬಂದಿದ್ದಾರೆ ಅಷ್ಟೇ. ವಿಧಾನಸೌಧದ ಒಳಗೆ ಸಭೆ ಮಾಡಿದರೆ ತಪ್ಪು.
ಖಾಸಗಿ ಹೊಟೇಲ್ನಲ್ಲಿ ಡಿ.ಕೆ.ಶಿವಕುಮಾರ್ ಸಭೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಸುರ್ಜೇವಾಲ ಬಂದಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿಲ್ಲ. ಬಿಜಪಿಯವರು ದೂರು ನೀಡಲಿ. ರಾಜಭವನದವರು ಪರಿಶೀಲನೆ ಮಾಡ್ತಾರೆ ಎಂದಿದ್ದಾರೆ.