ಲಾಕ್ ಡೌನ್ ವೇಳೆ ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟಿರುವ ಸರಕಾರದ ಕ್ರಮ ಪ್ರಶ್ನಿಸಿ ಅರ್ಜಿ ಸಲ್ಲಿಸಲು ಕಾಂಗ್ರೆಸ್ ಮುಂದಾಗಿದೆ.
ಮದ್ಯ ಮಾರಾಟದಿಂದ ಮಹಿಳೆಯರ ಮೇಲೆ ಕೌಟುಂಬಿಕ ಹಿಂಸೆಗಳು ಹೆಚ್ಚುತ್ತಿವೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮದ್ಯದ ಅಂಗಡಿಗಳ ಮುಂದೆ ಕ್ಯೂ ನಿಲ್ಲಲಾಗುತ್ತಿದೆ. ಕೊರೊನಾ ವೈರಸ್ ತಡೆಗೆ ಮುಂದಾಗಿರುವ ಸಂದರ್ಭದಲ್ಲಿ ಮದ್ಯದ ಅಂಗಡಿಗೆ ಅನುಮತಿ ನೀಡಿರುವುದು ದುರದೃಷ್ಟಕರ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದ್ದಾರೆ.
ಮದ್ಯ ಮಾರಾಟಕ್ಕೆ ಅನುಮತಿ ನೀಡಿರುವುದರಿಂದ ಕಳೆದೆರಡು ತಿಂಗಳಿಂದ ದುಡಿಮೆ ಇಲ್ಲದ ಜನರು, ಕೂಡಿಟ್ಟ ಹಣದಿಂದ ಮದ್ಯ ಕೊಳ್ಳೋದಕ್ಕೆ ಮುಂದಾಗ್ತಿದ್ದಾರೆ. ಇದರಿಂದ ಮಹಿಳೆಯರಿಗೆ ಸಮಸ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.