ಬೆಂಗಳೂರು: ಇತ್ತ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಲ್ಲಿ ಮೂವರನ್ನು ಬಂಧಿಸುತ್ತಿದ್ದಂತೇ ಅತ್ತ ಮಂಡ್ಯದಲ್ಲಿ ಎರಡು ವರ್ಷದ ಹಿಂದೆ ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಲಾಗಿದೆ.
ಎರಡು ವರ್ಷ ಹಳೆಯ ಕೇಸ್ ನ್ನು ವಾಪಸ್ ಕೆದಕಿ ಕಾಂಗ್ರೆಸ್ ಸರ್ಕಾರ ಧ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹಸಚಿವ ಜಿ ಪರಮೇಶ್ವರ್ ಬಿಜೆಪಿ ಸರ್ಕಾರ ಈ ಕೆಲಸ ಮಾಡಬೇಕಾಗಿತ್ತು. ಆದರೆ ಮಾಡಿರಲಿಲ್ಲ. ಹೀಗಾಗಿ ನಾವು ಆ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.
ಮೊನ್ನೆಯಷ್ಟೇ ವಿಧಾನೌಧದಲ್ಲಿ ಕಾಂಗ್ರೆಸ್ ಸಂಸದ ಸೈಯದ್ ನಾಸಿರ್ ಹುಸೇನ್ ಬೆಂಬಲಿಗನೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಕಾಂಗ್ರೆಸ್ ಗೆ ತೀವ್ರ ಮುಜುಗರವುಂಟು ಮಾಡಿತ್ತು. ಈ ವಿಚಾರ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷ ಬಿಜೆಪಿಗೆ ಪ್ರಮುಖ ಅಸ್ತ್ರವಾಗಲಿದೆ. ಇದರ ಬೆನ್ನಲ್ಲೇ ಇದೀಗ ಎರಡು ವರ್ಷದ ಹಳೆಯ ಕೇಸ್ ಕಾಂಗ್ರೆಸ್ ಸರ್ಕಾರ ಮರು ಜೀವ ನೀಡಿದೆ.
2022 ರ ಡಿಸೆಂಬರ್ 22 ರಂದು ಮಂಡ್ಯದಲ್ಲಿ ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತ ರವಿ ಕನ್ಫೂಜ್ ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದರು. ಆದರೆ ಘೋಷಣೆ ಕೂಗುವ ಬರದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದರು. ಇದನ್ನು ಕೇಳಿಸಿಕೊಂಡು ಪಕ್ಕದಲ್ಲಿದ್ದ ಇನ್ನೊಬ್ಬ ಕಾರ್ಯಕರ್ತ ಆತನ ಬಾಯಿ ಮುಚ್ಚಿಸಿದ್ದ. ಇದೀಗ ಈ ಪ್ರಕರಣಕ್ಕೆ ಮರು ಜೀವ ನೀಡಲಾಗಿದೆ.