ಬಿಜೆಪಿಯವರು ಅಭಿವೃದ್ಧಿ ವಿರೋಧಿಗಳು, ಕೆಲ ಸಂಘಟನೆಗಳು ನಗರದ ಅಭಿವೃದ್ಧಿಯನ್ನು ಸಹಿಸುತ್ತಿಲ್ಲ ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಟೀಲ್ ಬ್ರಿಡ್ಜ್ ಯೋಜನೆ ಅಧಿಕೃತವಾಗಿ ರದ್ದುಪಡಿಸಿದ್ದೇವೆ. ಸಿಎಂ ಜೊತೆ ಚರ್ಚಿಸಿದ ನಂತರ ಯೋಜನೆಯನ್ನು ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.
ಯೋಜನೆಯಲ್ಲಿ ಯಾವುದೇ ರೀತಿಯಲ್ಲಿ ಅವ್ಯವಹಾರವಾಗಿಲ್ಲ. ವಿಪಕ್ಷಗಳ ಆರೋಪಗಳಲ್ಲಿ ಸತ್ಯಾಂಶವಿಲ್ಲ. ನಗರದ ಶಾಸಕರು ಮತ್ತು ನಾಗರಿಕರು ವಿರೋಧ ವ್ಯಕ್ತಪಡಿಸಿದ್ದರಿಂದ ಯೋಜನೆಯನ್ನು ಅಂತಿಮವಾಗಿ ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಶಾಸಕರಿಗೆ, ಜನರಿಗೆ ಸ್ಟೀಲ್ ಬ್ರಿಡ್ಜ್ ಬೇಡವೆಂದ ಮೇಲೆ ನಮಗ್ಯಾಕೆ ಸ್ಟೀಲ್ ಬ್ರಿಡ್ಜ್ ಬೇಕು. ಆದ್ದರಿಂದ, ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಕೈಬಿಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.