ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಸುಮಾರು 50 ಶಾಸಕರು ಕಾಂಗ್ರೆಸ್ ಸೇರ್ತಾರೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.
ಕೊಪ್ಪಳ್ಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂತರಿಕ ಕಚ್ಚಾಟದಿಂದ ಮುಂಬರುವ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ಭವಿಷ್ಯ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಸುಮಾರು 50 ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಖಾಸಗಿ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರು ಪಕ್ಷ ತೊರೆಯುವ ನಿರೀಕ್ಷೆ ಇದೆ. ಆದರೆ, ಪಕ್ಷದಲ್ಲಿನ ಆಂತರಿಕ ಕಾರಣಕ್ಕಾಗಿ ಪಕ್ಷ ಬಿಡುವುದು ಬೇಡ ಎಂದು ಕಿವಿಮಾತು ಹೇಳಿದ್ದಾರೆ.
ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗಿದ್ದ ಜನಪ್ರಿಯತೆ ಈಗಿಲ್ಲ. ಸಮ್ಮಿಶ್ರ ಸರಕಾರ ಪತನವಾದಾಗ ಬಿಎಸ್‌ವೈ ಮೇಲೆ ಸಿಂಪತಿ ಇತ್ತು. ಆದರೆ, ಇದೀಗ ಬಿಎಸ್‌ವೈಗೆ ಜನರ ಆಶೀರ್ವಾದ ಇಲ್ಲ ಎಂದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಉತ್ತರ ಕರ್ನಾಟಕದ ಲಿಂಗಾಯತ ವರ್ಗದವರಿಗೆ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.