Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ವಿಧಾನ ಪರಿಷತ್ ಸದಸ್ಯರಾಗಿ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆಯಾಗಿದ್ದಾರೆ.
ಸಿ.ಎಂ. ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾದ ಎಂಎಲ್ಸಿ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಆ.11ರಂದು ಮತದಾನ ನಡೆಯಬೇಕಿತ್ತು.
ಬಿಜೆಪಿ ಅಭ್ಯರ್ಥಿಯಾಗಿ ಬಾಬುರಾವ್ ಚಿಂಚನಸೂರ್ ಅಖಾಡಕ್ಕಿಳಿದರೆ, ಕಾಂಗ್ರೆಸ್ ಮತ್ತು ಜೆಡಿಎಸ್ನಿಂದ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ. ಹಾಗಾಗಿ ವಿಧಾನಸಭೆ ಕಾರ್ಯದರ್ಶಿಯೂ ಆದ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರು ಬಾಬುರಾವ್ ಚಿಂಚನಸೂರ್ ಹೆಸರನ್ನು ಅವಿರೋಧ ಆಯ್ಕೆಯನ್ನಾಗಿ ಗುರುವಾರ ಘೋಷಣೆ ಮಾಡಿದರು.
ಮೇಲ್ಮನೆ ಪ್ರತಿಪಕ್ಷ ನಾಯಕ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ ಸಿ.ಎಂ. ಇಬ್ರಾಹಿಂ, ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕಳೆದ ಮಾರ್ಚ್ನಲ್ಲಿ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ತೊರೆದ ಅವರು ಜೆಡಿಎಸ್ ಸೇರ್ಪಡೆಯಾದರು. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ ಇಬ್ರಾಹಿಂಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. 2024ರ ಜೂನ್ 17ರ ವರೆಗೂ ಎಂಎಲ್ಸಿ ಸದಸ್ಯತ್ವ ಇತ್ತು. ಅವಧಿಗೂ ಮುನ್ನವೇ ಇಬ್ರಾಹಿಂ ರಾಜೀನಾಮೆ ನೀಡಿದ ಹಿನ್ನೆಲೆ ಬಾಬುರಾವ್ ಚಿಂಚನಸೂರ್ ಆಯ್ಕೆಯಾದರು.