Publish Date: Tue, 15 May 2018 (12:54 IST)
Updated Date: Tue, 15 May 2018 (12:57 IST)
ಬೆಂಗಳೂರು : ಮತ ಎಣಿಕೆ ವೇಳೆ ಗೋಲ್ ಮಾಲ್ ಮಾಡಲಾಗಿದೆ ಎಂದು ಆರೋಪಿಸಿ ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೇಲ್ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿ ಪ್ರತಿಭಟನೆ ಮಾಡುತ್ತಿರುವುದಾಗಿ ತಿಳಿದುಬಂದಿದೆ.
ಈ ಬಾರಿ ಚುನಾವಣೆಯಲ್ಲಿ ಎಲ್ಲಾ ಕಡೆ ಬಿಜೆಪಿ ಗೆಲುವು ಸಾಧಿಸಿದ್ದು, ಆದರೆ ಬಬಲೇಶ್ವರ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೇಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ.ಪಾಟೀಲ್ ಎದುರು ಹಿನ್ನಡೆ ಅನುಭವಿಸಿದ್ದಾರೆ. ಇದರಿಂದ ಬೇಸರಗೊಂಡ ವಿಜುಗೌಡ ಪಾಟೇಲ್ ಅವರು,’12 ಮತಪೆಟ್ಟಿಗೆಗಳು ಬದಲಾಗಿದೆ. ಇದಕ್ಕೆ ಚುನಾವಣಾ ಅಧಿಕಾರಿಗಳ ಧನದಾಹವೇ ಕಾರಣ. ಅಧಿಕಾರಿಗಳ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವೆ’ ಎಂದು ಬೆದರಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ