ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿ ರೂಪಿಸಿದ್ದರು.. ಆದರೆ, ಬಿಜೆಪಿ ಸಿಎಂಗಳು ಬೆಂಗಳೂರನ್ನು ಗಾರ್ಬೇಜ್ ಸಿಟಿ ಮಾಡಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ಗಂಭೀರವಾಗಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ರಾಜಧಾನಿ ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿ ರೂಪಿಸಿದರೂ. ಬಿಜೆಪಿ ಮುಖ್ಯಮಂತ್ರಿಗಳು ಬೆಂಗಳೂರನ್ನು ಗಾರ್ಬೇಜ್ ಸಿಟಿಯಾಗಿ ಮಾಡಿದ್ದರು. ಆದರೆ, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಮುಂದಾಗಿದ್ದಾರೆ ಎಂದರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ತಮ್ಮ ಕಾರ್ಪೋರೇಟರ್ಗಳು ಹಾಗೂ ವೋಟ್ ಬ್ಯಾಂಕ್ ಇರುವ ಸ್ಥಳದಲ್ಲಿ ಮಾತ್ರ ಪಾರ್ಕ್ಗಳನ್ನು ನಿರ್ಮಾಣ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಮಗ್ರ ಬೆಂಗಳೂರಿನ ಅಭಿವೃದ್ಧಿಗೆ 2 ಸಾವಿರ ಕೋಟಿ ರೂಪಾಯಿ ಅಗತ್ಯವಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರಿನ ಅಭಿವೃದ್ಧಿಗೆ ಮುಂದಾಗಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ