ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆಗೊಳಿಸಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 72 ಅಭ್ಯರ್ಥಿಗಳ ಪೈಕಿ ಲಿಂಗಾಯತರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ.
6 ಮಂದಿ ಬ್ರಾಹ್ಮಣ ಮತ್ತು ಒಬ್ಬ ಕೊಡವ ಸಮುದಾಯದವರಿಗೂ ಬಿಜೆಪಿ ಮಣೆ ಹಾಕಿದೆ. ಆದರೆ ಬಹುಪಾಲು ಅಭ್ಯರ್ಥಿಗಳು ಲಿಂಗಾಯತ ಸಮುದಾಯಕ್ಕೆ ಸೇರಿದವರು ಎಂಬುದು ವಿಶೇಷ.
ಈ ಮೂಲಕ ಲಿಂಗಾಯತ ಸಮುದಾಯದ ಮತಕ್ಕೆ ಕೈ ಹಾಕಿರುವ ಕಾಂಗ್ರೆಸ್ ಗೆ ಸೆಡ್ಡು ಹೊಡೆಯಲು ಬಿಜೆಪಿ ತಂತ್ರ ರೂಪಿಸಿದೆ. ಈ ಮೂಲಕ ಲಿಂಗಾಯತ ಸಮುದಾಯದ ಮತಗಳು ಒಡೆದು ಹೋಗದಂತೆ ಬಿಜೆಪಿ ರಣತಂತ್ರ ಹೆಣೆದಿದೆ. ಇದು ಎಷ್ಟರಮಟ್ಟಿಗೆ ಯಶಸ್ಸು ಕಾಣುತ್ತದೋ ಎಂದು ಚುನಾವಣೆ ಮುಗಿದ ನಂತರವೇ ಗೊತ್ತಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.