ರಾಜ್ಯ ಬಿಜೆಪಿ ಘಟಕದ ಮಹತ್ವದ ಕೋರ್ ಕಮಿಟಿ ಸಭೆ ನಾಳೆ ನಡೆಯಲಿದೆ. ಸಭೆ ಬಳಿಕ ಚುನಾವಣೆ ಆಯೋಗಕ್ಕೆ ದೂರುಗಳನ್ನು ಸಲ್ಲಿಸಲು ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಿಂಬಾವಳಿ ಸುದ್ದಿಗೋಷ್ಠಿ ನಡೆಸಿದ್ದು, 66.45% ರಷ್ಟು ಮತದಾರರು ಮತ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ, ಮೋದಿ ಪರವಾದ ಅಲೆಯಿದೆ. 22 ಕ್ಕೂ ಹೆಚ್ಚಿನ ಸ್ಥಾನಗಳನ್ನ ಗೆಲ್ಲುತ್ತೇವೆ ಎಂದರು.
ಇನ್ನು ಮತದಾರರ ಪಟ್ಟಿಯಿಂದ ಕೊನೆ ಕ್ಷಣದಲ್ಲಿ ಹೆಸರುಗಳನ್ನ ಅಳಿಸಿರುವ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಕೊಡ್ತೇವೆ. ರಾಜ್ಯ ಚುನಾವಣಾ ಆಯೋಗಕ್ಕೂ ದೂರು ಕೊಡ್ತೇವೆ. ಉಪ ಚುನಾವಣೆ ನಡೆಯುವ ಎರಡು ವಿಧಾನಸಭಾ ಕ್ಷೇತ್ರಗಳ ಜಿಲ್ಲೆಗಳ ಮುಖಂಡರ ಸಭೆ ನಾಳೆ ಮಾಡುತ್ತೇವೆ ಎಂದರು.
ಜಿಲ್ಲಾ ಮುಖಂಡರ ಸಲಹೆ ಪಡೆದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಅಭ್ಯರ್ಥಿಗಳ ಪಟ್ಟಿ ಕಳಿಸ್ತೇವೆ ಅಂತ
ಅರವಿಂದ್ ಲಿಂಬಾವಳಿ ಹೇಳಿಕೆ ನೀಡಿದ್ದಾರೆ.