Publish Date: Mon, 17 Aug 2020 (11:12 IST)
Updated Date: Mon, 17 Aug 2020 (11:14 IST)
ಬೆಂಗಳೂರು : ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನಿವಾಸದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಭೆ ಕರೆದಿದ್ದಾರೆ.
ಅಧಿಕಾರಿಗಳ ಜತೆ ಸಭೆ ನಡೆಸಿದ ಗೃಹ ಸಚಿವರು ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. ಇದೀಗ ಸಭೆ ಮುಕ್ತಾಯವಾಗಿದ್ದು, ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆಗೆ ತೆರಳಿದ್ದಾರೆ ಎನ್ನಲಾಗಿದೆ.
ಹಾಗೇ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ನೇತೃತ್ವದ ನಿಯೋಗಯೊಂದನ್ನು ರಚಿಸಲಾಗಿದ್ದು, ಇಂದು ಸಂಜೆ 4.30ಕ್ಕೆ ಗೃಹ ಸಚಿವರ ನಿವಾಸದಲ್ಲಿ ಸಚಿವರನ್ನು ಭೇಟಿ ಮಾಡಿ ಬಳಿಕ ಡಿಜೆ ಹಳ್ಳಿಗೆ ತೆರಳಿದ್ದಾರೆ ಎನ್ನಲಾಗಿದೆ.