Webdunia - Bharat's app for daily news and videos

Install App

ಕೆಪಿಎಸ್‍ಸಿ ಹಗರಣದ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

ಸಂಪ್ರಿಯ
ಸೋಮವಾರ, 27 ಜುಲೈ 2026 (17:45 IST)
Photo Credit X
ಬೆಂಗಳೂರು: ಕೆಪಿಎಸ್‍ಸಿಯ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ₹80 ಲಕ್ಷದವರೆಗೆ ಲಂಚ ಪಡೆದಿರುವ ಗಂಭೀರ ಆರೋಪಗಳಿದ್ದು, ಸಿಬಿಐ ಅಥವಾ ಕರ್ನಾಟಕ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಯವರ ನೇತೃತ್ವದ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಬಿಜೆಪಿ ನಿಯೋಗವು ಒತ್ತಾಯಿಸಿದೆ. ಈ ಸಂಬಂಧ ಮನವಿ ಸಲ್ಲಿಸಿ ಆಗ್ರಹಿಸಿದೆ.

ಈ ಹಗರಣವು  ಕರ್ನಾಟಕದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ನಂಬಿಕೆಗೆ ದೊಡ್ಡ ಆಘಾತ ನೀಡಿವೆ. ಇಂತಹ ಸಂದರ್ಭದಲ್ಲಿ ಕೆಪಿಎಸ್‍ಸಿಯೇ ತನ್ನ ವಿರುದ್ಧದ ಆರೋಪಗಳನ್ನು ಆಂತರಿಕವಾಗಿ ತನಿಖೆ ನಡೆಸುವುದರಿಂದ ಸತ್ಯ ಹೊರಬರುವುದಿಲ್ಲ; ಸಾರ್ವಜನಿಕರ ವಿಶ್ವಾಸವೂ ಮೂಡುವುದಿಲ್ಲ ಎಂದು ಮನವಿ ತಿಳಿಸಿದೆ.

ಈ ನಿಟ್ಟಿನಲ್ಲಿ ಇಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಹಿರಿಯ ಶಾಸಕ ಸುರೇಶ್ ಕುಮಾರ್ ಅವರೊಂದಿಗೆ ಕೆಪಿಎಸ್‍ಸಿ ಕಾರ್ಯದರ್ಶಿಯವರನ್ನು ಭೇಟಿ ಮಾಡಿ, ಈ ಆಂತರಿಕ ತನಿಖೆಯನ್ನು ತಕ್ಷಣವೇ ರದ್ದುಗೊಳಿಸಲು ಒತ್ತಾಯಿಸಲಾಯಿತು. ಅಲ್ಲದೇ, ಪ್ರಕರಣವನ್ನು ಸಿಬಿಐ ಅಥವಾ ಕರ್ನಾಟಕ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಯವರ ನೇತೃತ್ವದ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಇದು ಕೇವಲ ಒಂದು ನೇಮಕಾತಿಯ ಪ್ರಶ್ನೆಯಲ್ಲ. ತಮ್ಮ ಜೀವನದ ಅಮೂಲ್ಯ ವರ್ಷಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಮೀಸಲಿಟ್ಟಿರುವ ಲಕ್ಷಾಂತರ ಯುವಕರ ಕನಸು, ಪರಿಶ್ರಮ ಮತ್ತು ನ್ಯಾಯಯುತ ಹಕ್ಕಿನ ಪ್ರಶ್ನೆಯಾಗಿದೆ. ವಿಶ್ವಾಸಾರ್ಹತೆ ಇಲ್ಲದ ಕಾಟಾಚಾರದ ತನಿಖೆಯಿಂದ ಯಾರಿಗೂ ಪ್ರಯೋಜನವಿಲ್ಲ. ಕೆಪಿಎಸ್‍ಸಿಯ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಮರುಸ್ಥಾಪಿಸಲು ಸಂಪೂರ್ಣ ಸ್ವತಂತ್ರ ತನಿಖೆಯೊಂದೇ ಮಾರ್ಗ ಎಂದು ತಿಳಿಸಲಾಯಿತು.

ಉದ್ಯೋಗಾಕಾಂಕ್ಷಿ ಯುವಜನರ ಹಕ್ಕುಗಳಿಗಾಗಿ ನಮ್ಮ ಹೋರಾಟ ನಿರಂತರ ಎಂದು ಛಲವಾದಿ ನಾರಾಯಣಸ್ವಾಮಿ ಮತ್ತು ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ತಮಿಳುನಾಡು ರೈತರು ಯಾವಾ ರೀತಿ ಪ್ರತಭಟನೆ ನಡೆಸಿದ್ರು ಗೊತ್ತಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

Video: ಮದುಮಗನ ದಿರಿಸಿನಲ್ಲಿ ಮೆಟ್ರೋ ಏರಿದ ಮದುಮಗ: ಕಾರಣ ನಿಜಕ್ಕೂ ಶಾಕಿಂಗ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಮುಂದಿನ ಸುದ್ದಿ
Show comments