ಬಿಜೆಪಿ ಅಧಿಕಾರದಲ್ಲಿದ್ದಾಗ ಪ್ರಭಾವಿ ಮುಖಂಡರಾಗಿದ್ದ ಮಾಜಿ ಸಚಿವ ಆನಂದ್ ಅಸ್ನೋಟಿಕರ್, ಬಿಜೆಪಿಯನ್ನು ತೊರೆದು ಜೆಡಿಎಸ್ ಪಾಳಯದತ್ತ ತಮ್ಮ ಚಿತ್ತ ಹರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕಳೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಸತೀಶ್ ಸೈಲ್ ಎದುರು ಸೋಲನುಭವಿಸಿದ್ದ ಅಸ್ನೋಟಿಕರ್, ಮತ್ತೆ ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಉಹಾಪೋಹಗಳು ಹರಡಿವೆ.
ಮುಂಬರುವ ವಿಧಾನಸಭೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿರುವಂತೆ ಮುಂದೆ ಜೆಡಿಎಸ್ ಪಕ್ಷ ಸರಕಾರ ರಚಿಸುವ ಸಾಧ್ಯತೆಗಳಿವೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಅಂತಹ ಪಕ್ಷಕ್ಕೆ ಸೇರ್ಪಡೆಯಾಗುವುದು ಸೂಕ್ತ ಎನ್ನುವ ಅಭಿಪ್ರಾಯ ಹೊಂದಿದ್ದಾರೆ ಎಂದು ಅವರ ಆತ್ಮಿಯ ಮೂಲಗಳು ತಿಳಿಸಿವೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ. ಒಂದು ವೇಳೆ ಜೆಡಿಎಸ್ ಪಕ್ಷ ಸರಕಾರ ರಚಿಸಿದಲ್ಲಿ ಉತ್ತಮ ಸ್ಥಾನಮಾನ ದೊರೆಯಬಹುದು ಎನ್ನುವ ನಿರೀಕ್ಷೆಯಿಂದಾಗಿ ಆನಂದ್ ಆಸ್ನೋಟಿಕರ್ ಜೆಡಿಎಸ್ ಪಕ್ಷಕ್ಕೆ ಮಣೆ ಹಾಕುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.