Publish Date: Tue, 04 Apr 2023 (19:43 IST)
Updated Date: Tue, 04 Apr 2023 (18:25 IST)
ಕಳೆದ ಮೂರು ನಾಲ್ಕು ದಿನಗಳ ಬೆಳವಣಿಗೆ ಗಮನಿಸಿದರೆ ಬಿಜೆಪಿಗೆ ಸಂಪೂರ್ಣ ಬಹುಮತ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕೆಲವು ಕ್ಷೇತ್ರದಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ.ಕಾರ್ಯಕರ್ತರು ಮತ್ತು ನಾಯಕರಿಗೆ ಆತ್ಮವಿಶ್ವಾಸವಿದೆ ಎಂದರು.ಏ .8 ರಂದು ಪಟ್ಟಿ ಬಿಡುಗಡೆ ವಾಸ್ತವಾಂಶ ಆಧರಿಸಿ ಅಭ್ಯರ್ಥಿ ಆಯ್ಕೆಯಾಗಿದೆ. ಇಂದು ರಾಜ್ಯ ಸಮಿತಿಯ ಸಭೆ ಕರೆದಿದ್ದು, ಎರಡು ದಿನಗಳ ಕಾಲ ನಡೆಯಲಿದೆ. ಸಭೆ ಬಳಿಕ ಕೇಂದ್ರಕ್ಕೆ ಅಭ್ಯರ್ಥಿಗಳ ಪಟ್ಟಿ ಕಳುಹಿಸಲಾಗುವುದು. 8 ನೇ ತಾರೀಖು ಕೇಂದ್ರದಲ್ಲಿ ಚರ್ಚೆಯಾಗಿ ಪಟ್ಟಿ ಬಿಡುಗಡೆಯಾಗಲಿದೆ ಎಂದರು.ಫಲಿತಾಂಶದ ನಂತರ ಜನರ ಅಭಿಮತ ತಿಳಿಯಲಿದೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಾಸಗಿ ಚಾನಲ್ ಸಂದರ್ಶನವೊಂದರಲ್ಲಿ ಮತ್ತೆ ಸಿಎಂ ಆಗುವ ಇಚ್ಛೆ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರೇನೋ ಬಯಸಿದ್ದಾರೆ ಆದರೆ ಜನರ ನಾಡಿ ಮಿಡಿತ ಏನಿದೆಯೋ ಯಾರಿಗೆ ಗೊತ್ತು..? ಫಲಿತಾಂಶ ಬಂದ ಮೇಲೆ ಜನರ ಅಭಿಮತ ತಿಳಿಯಲಿದೆ ಎಂದ ಅವರು ಜನರ ಬೆಂಬಲ ಇದ್ದಾರೆ ಮಾತ್ರ ಶಾಸಕನಾಗಲು ಸಾಧ್ಯ ಎಂದರಲ್ಲದೇ ಸಿದ್ದರಾಮಯ್ಯ ಅವರು ಹೊಸದೇನು ಹೇಳಿಲ್ಲ ಟೀಕಿಸಿದ್ರು