Publish Date: Sat, 06 May 2023 (16:30 IST)
Updated Date: Sat, 06 May 2023 (17:31 IST)
ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಹಿನ್ನೆಲೆಯಲ್ಲಿ ರಸ್ತೆಯ ಎರಡು ಬದಿಗಳಲ್ಲಿ ಬಿಜೆಪಿ ಬಾವುಟಗಳನ್ನು ಅಳವಡಿಸಲಾಗಿತ್ತು.. ಇದನ್ನು ಚುನಾವಣಾ ಅಧಿಕಾರಿಗಳ ಸೂಚನೆ ಮೇರೆಗೆ ತೆರವುಗೊಳಿಸಲಾಯಿತು. ಚುನಾವಣೆ ಅಧಿಕಾರಿಗಳ ವಿರೋಧದ ನಡುವೆಯೂ ಬಿಜೆಪಿ ಕಾರ್ಯಕರ್ತರು ಬಿಜೆಪಿ ಬಾವುಟ ಹಾಕಲು ಮುಂದಾದರು. ಇದೀಗ ಮತ್ತೆ ಬಾವುಟ ತೆರವುಗೊಳಿಸುವಂತೆ ಚುನಾವಣಾ ಅಧಿಕಾರಿಗಳು ಸೂಚನೆ ನೀಡಿದ ಮೇರೆಗೆ ಕಾಡು ಮಲ್ಲೇಶ್ವರ ದೇಗುಲದ ಬಳಿ ಬಾವುಟಗಳನ್ನು ತೆರವುಗೊಳಿಸಲಾಯಿತು. ಬೆಂಗಳೂರಿನ ಹಲವೆಡೆ ಬಿಜೆಪಿ ಬಾವುಟಗಳು ರಾರಾಜಿಸುತ್ತಿದ್ದು, ಚುನಾವಣಾ ಅಧಿಕಾರಿಗಳ ಸೂಚನೆ ಮೇರೆಗೆ ಬಾವುಟಗಳನ್ನು ತೆರೆವುಗೊಳಿಸಲಾಗುತ್ತಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಬಾವುಟಗಳನ್ನು ತೆರವುಗೊಳಿಸಲಾಗಿದೆ.