Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷದ ಧ್ವನಿ ಅಡಗಿಸಲು ಬಿಜೆಪಿ ಸರ್ಕಾರ ಪ್ರಯತ್ನ- ಡಿ.ಕೆ. ಶಿವಕುಮಾರ್

Webdunia
ಮಂಗಳವಾರ, 21 ಜೂನ್ 2022 (20:52 IST)
‘ರಾಜಕೀಯ ದ್ವೇಷದಿಂದ ಸುಳ್ಳು ಪ್ರಕರಣ ದಾಖಲಿಸಿ ಕಾಂಗ್ರೆಸ್ ಪಕ್ಷದ ಧ್ವನಿ ಅಡಗಿಸಲು ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದ್ದು, ಇದು ಸಾಧ್ಯವಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ, ಈ ಕೂರಿತು ದೆಹಲಿಯಲ್ಲಿ ಮಾತನಾಡಿ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಕಚೇರಿ ಮೇಲೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ದಾಳಿ ನಡೆಸುತ್ತಿದೆ. ಪಕ್ಷದ ಕಚೇರಿ ನಮಗೆ ದೇವಾಲಯವಿದ್ದಂತೆ. ಆದರೆ ಕೇಂದ್ರ ಸರ್ಕಾರ ಪೊಲೀಸರನ್ನು ಬಳಸಿಕೊಂಡು, ಅಲ್ಲಿಗೆ ಯಾರೂ ಬರಬಾರದು, ಅಲ್ಲಿ ಯಾರೂ ಸೇರುವಂತಿಲ್ಲ ಎಂದು ದಬ್ಬಾಳಿಕೆ ನಡೆಸುತ್ತಿದೆ. ಅದನ್ನು ಖಂಡಿಸಿ ಪ್ರತಿಭಟನೆ ವ್ಯಕ್ತಪಡಿಸಲು ಇಲ್ಲಿಗೆ ಬಂದಿದ್ದೇವೆ. ಇಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದು, ಅದರ ಬಗ್ಗೆಯೂ ಅರಿವಿದೆ. ಸೂರ್ಯ ಹುಟ್ಟುತ್ತಾನೆ, ಮುಳುಗುತ್ತಾನೆ. ಅದೇ ರೀತಿ ಎಲ್ಲರಿಗೂ ರಾಜಕೀಯದಲ್ಲಿ ದಿನಗಳು ಬದಲಾಗುತ್ತವೆ. ಬಿಜೆಪಿಯವರು ಇದನ್ನು ಅರ್ಥ ಮಾಡಿಕೊಂಡಂತೆ ಕಾಣುತ್ತಿಲ್ಲ. ಏನೇ ಆದರೂ ನಾವು ನಮ್ಮ ನಾಯಕರ ಜತೆ ಇರುತ್ತೇವೆ, ಕಷ್ಟಕಾಲದಲ್ಲಿ ಅವರ ಜತೆ ನಿಂತು, ಅವರಿಗೆ ಧೈರ್ಯ ತುಂಬುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments