Publish Date: Tue, 20 Aug 2019 (19:40 IST)
Updated Date: Tue, 20 Aug 2019 (19:42 IST)
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರೋ ಬಿಜೆಪಿ ನೇತೃತ್ವದ ಸರಕಾರದ ಆಯಸ್ಸು ಕೇವಲ ಆರೆಂಟು ತಿಂಗಳು ಮಾತ್ರ.
ಹೀಗಂತ ಮಾಜಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಇದಕ್ಕೆ ಪೂರಕವೆನ್ನುವಂತೆ ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು ಒಂದೆಡೆ ಸಚಿವಸ್ಥಾನದಿಂದ ಅತೃಪ್ತರಾಗಿರೋ ಶಾಸಕರು ಸಭೆ ನಡೆಸಿದ್ದಾರೆ.
ಇನ್ನೊಂದೆಡೆ ಬಿಜೆಪಿ ಹಿರಿಯ ಶಾಸಕರಾದ ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಸಿ.ಎಂ.ಉದಾಸಿ, ಮುರುಗೇಶ್ ನಿರಾಣಿ, ಎಂ.ಪಿ.ರೇಣುಕಾಚಾರ್ಯ, ಎಸ್.ಅಂಗಾರ, ಬಸವನಗೌಡ ಪಾಟೀಲ್ ಯತ್ನಾಳ, ತಿಪ್ಪಾರೆಡ್ಡಿ, ಗೂಳಿಹಟ್ಟಿ ಶೇಖರ್, ರಾಜುಗೌಡ ಮೊದಲಾದವರು ತೀವ್ರ ಅಸಮಧಾನಗೊಂಡಿದ್ದಾರೆ. ಕೆಲವು ಶಾಸಕರು ಬಹಿರಂಗವಾಗಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.
ಇದು ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಲಿದೆ.