ಬೆಂಗಳೂರು : ಬಿಜೆಪಿ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುತ್ತಿರುವ ಬೆನ್ನಲ್ಲೇ ಇದೀಗ ಡಿಸಿಎಂ ಹುದ್ದೆಯ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
ಹೌದು. ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮೂವರಿಗೆ ಡಿಸಿಎಂ ಹುದ್ದೆಗಳು ಸೃಷ್ಟಿಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಆರ್.ಎಸ್,ಎಸ್ ಹಿನ್ನಲೆಯಿರುವವರಿಗೆ ಡಿಸಿಎಂ ಹುದ್ದೆ ನೀಡಲು ಹೈಕಮಾಂಡ್ ಸೂಚಿಸಿದ್ದಾರೆ ಎನ್ನಲಾಗಿದೆ.
ಕುರುಬ ಸಮುದಾಯದ ಕೆ.ಎಸ್. ಈಶ್ವರಪ್ಪ, ಒಕ್ಕಲಿಗ ಸಮುದಾಯದ ಆರ್. ಅಶೋಕ್ ಮತ್ತು ದಲಿತ ಸಮುದಾಯದ ಗೋವಿಂದ ಕಾರಜೋಳ ಗೆ ಡಿಸಿಎಂ ಹುದ್ದೆ ನೀಡುವ ಕುರಿತು ಚರ್ಚೆ ನಡೆಯುತ್ತಿದೆ ಎನ್ನಲಾಗಿದ್ದು, ಡಿಸಿಎಂ ಹುದ್ದೆ ಫೈನಲ್ ಆದ ಬಳಿಕ ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ ನಡೆಯಲಿದೆ ಎನ್ನಲಾಗುತ್ತಿದೆ.