Publish Date: Tue, 08 Nov 2022 (12:13 IST)
Updated Date: Tue, 08 Nov 2022 (09:14 IST)
ಬೆಳಗಾವಿ : ಬಿಜೆಪಿಯವರು ನನ್ನನ್ನು ಕ್ರಿಮಿನಲ್ ಮಾಡಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿಯನ್ನೂ ಸಹ ಕ್ರಿಮಿನಲ್ ಮಾಡಿದ್ದಾರೆ.
ರಾಜಕೀಯವಾಗಿ ಯಾರು ಯಾರು ಬೆಳೆಯುತ್ತಾರೆ, ಪ್ರಬಲವಾಗಿ ಇರುವವರನ್ನು ಕ್ರಿಮಿನಲ್ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ದೃಷ್ಠಿಯಿಂದ ನಾಯಕರು, ಅವರ ಅಭಿಮಾನಿಗಳು, ಕಾರ್ಯಕರ್ತರು ಹುಟ್ಟುಹಬ್ಬ ಮಾಡುತ್ತಿದ್ದಾರೆ.
ಧಾರವಾಡಕ್ಕೆ ಹೋಗಲು ಕೋರ್ಟ್ ನಿರ್ಬಂಧ ಹೇರಿದೆ. ಹೀಗಾಗಿ ಪಕ್ಕದ ಕ್ಷೇತ್ರದಲ್ಲಿ ಅವರ ಕಾರ್ಯಕ್ರಮ ಮಾಡುತ್ತಿದ್ದಾರೆ. ಹುಟ್ಟುಹಬ್ಬ ಆಚರಣೆಯಲ್ಲಿ ಒಬ್ಬೊಬ್ಬರದ್ದು ಒಂದೊಂದು ಶೈಲಿ ಇರುತ್ತದೆ.