ಹಾಡುಹಗಲೇ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮನ್ನು ದೊಷಿಸುವುದಕ್ಕೆ ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದರು.
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕಾಯ್ದುಕೊಳ್ಳಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿ ಎಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಿಯೋಗ ರಾಜ್ಯಪಾಲ ಭೇಟಿ ಮಾಡಿದ್ದ ಹಿನ್ನೆಲೆಯಲ್ಲಿ ಇಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸಿದರು.
ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ್, ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ತನಿಖೆ ನಡೆಸಲು ರಾಜ್ಯ ಪೊಲೀಸರು ಸಮರ್ಥರಿದ್ದಾರೆ. ರುದ್ರೇಶ್ ಕೊಲೆ ಪ್ರಕರಣವನ್ನು ಸಿಬಿಐ ಅಥವಾ ಎನ್‌ಐಎ ತನಿಖೆಗೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಬಿಜೆಪಿಯವರು ಆರೋಪಿಸುತ್ತಿದ್ದಾರೆ. ಆದರೆ, ನಮ್ಮನ್ನು ದೊಷಿಸುವುದಕ್ಕೆ ಅವರಿಗೆ ನೈತಿಕ ಹಕ್ಕಿಲ್ಲ ಎಂದು ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ